ವಿಜಯಪುರ,17: ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ಜನರಿಗೆ ಕುಡಿಯುವ ನೀರಿನ ಸೌಲಭ್ಯ, ಉದ್ಯೋಗ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿಗಳಾದ ಮೊಹ್ಮದ ಮೊಹಸೀನ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಈಗಾಗಲೇ ಜಿಲ್ಲೆಯ 5 ತಾಲೂಕುಗಳನ್ನು ಬರ ಪೀಡಿತವೆಂದು ಘೋಷಿಸಲಾಗಿದ್ದು, ಆಯಾ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ತಹಶೀಲ್ದಾರರು ತಾಲೂಕಾ ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಸಹಾಯಕ ಕಾರ್ಯನಿವರ್ಾಹಕ ಅಭಿಯಂತರರು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಜೊತೆಗೆ ಪ್ರತಿವಾರ ಸಭೆ ನಡೆಸಿ, ಕುಡಿಯುವ ನೀರಿನ ಸಮಸ್ಯೆ, ನೀರು ಸರಬರಾಜು ಸಮಸ್ಯೆ ಹಾಗೂ ಉದ್ಯೋಗ ಸಮಸ್ಯೆಯನ್ನು ಪರಿಹರಿಸಿ ಜನರಿಗೆ ಅನುಕೂಲ ಮಾಡಿಕೊಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಬರ ಇರುವ ಹಿನ್ನಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಉದ್ಯೋಗ ಕಲ್ಪಿಸುವ ಕುರಿತಂತೆ ಸಾರ್ವಜನಿಕರಿಂದಲೇ ಬೇಡಿಕೆ ಬರುತ್ತಿರುವ ಹಿನ್ನಲೆಯಲ್ಲಿ ತಕ್ಷಣ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಡಿ ಉದ್ಯೋಗಾವಕಾಶ ಕಲ್ಪಿಸಬೇಕು. ಸಕರ್ಾರ ಬರ ಜಿಲ್ಲೆಗಳಲ್ಲಿ ಹೆಚ್ಚಿನ ಆದ್ಯತೆ ನೀಡಿದ್ದು, ಸಕರ್ಾರದ ಆದೇಶದನ್ವಯ ಕಾರ್ಯನಿರ್ವಹಿಸುವ ಜೊತೆಗೆ ಜನರಿಗೆ ನೀರಿನ ಸೌಲಭ್ಯ, ಜಾನುವಾರು ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಬರ ಕಾರ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಬಗ್ಗೆ ಸಕರ್ಾರಕ್ಕೂ ಸಹ ಸೂಕ್ತ ಕ್ರಮಕ್ಕೆ ಶಿಫಾರಸ್ಸು ಮಾಡುವುದಾಗಿ ಅವರು ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ವಿವಿಧ ಯೋಜನೆಗಳಿಗೆ ಸಂಬಂಧಪಟ್ಟಂತೆ ಕ್ರೀಯಾಯೋಜನೆಗಳ ಅನುಮೋದನೆ ಮತ್ತು ವಿವಿಧ ಟೆಂಡರ್ ಪ್ರಕ್ರಿಯೆಗಳನ್ನು ಡಿಸೆಂಬರ್ 15ರೊಳಗೆ ಮುಕ್ತಾಯಗೊಳಿಸಿ ತೀವ್ರಗತಿಯಲ್ಲಿ ಕಾಮಗಾರಿಗಳನ್ನು ಆರಂಭಿಸುವ ಜೊತೆಗೆ ಗುಣಮಟ್ಟದ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸುವಂತೆ ಅವರು ಸೂಚನೆ ನೀಡಿದರು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾದ ಕ್ರಮಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಅವರು, ಈ ಯೋಜನೆಯಡಿ ಕೆರೆ ಹೂಳೆತ್ತುವುದು, ಬಾಂದಾರ, ರಸ್ತೆ ನಿಮರ್ಾಣ ಸೇರಿದಂತೆ ಉದ್ಯೋಗ ಕಲ್ಪಿಸುವ ಕಾರ್ಯ ಚುರುಕುಗೊಳಿಸಬೇಕು. ಕೇಂದ್ರ ಬರ ಅಧ್ಯಯನ ತಂಡ ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಮಾರ್ಗಸೂಚಿಯನ್ವಯ ಕೈಗೊಳ್ಳಲಾದ ಎಲ್ಲ ಕ್ರಮಗಳ ವರದಿಯನ್ನು ಸಹ ಸಿದ್ಧಪಡಿಸಿಕೊಳ್ಳುವಂತೆ ಸೂಚನೆ ನೀಡಿ, ವಿವಿಧ ಗ್ರಾಮಗಳಿಗೆ ನೀರು ಪೂರೈಕೆಗೆ ಅನುಕೂಲವಾಗುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸುವ ಜೊತೆಗೆ ನೀರು ಪೂರೈಕೆಗೆ ಪ್ರಥಮಾದ್ಯತೆ ನೀಡುವಂತೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ 90 ದಿನಗಳಿಗೂ ಮೀರಿ ಟ್ಯಾಂಕರ್ ಮೂಲಕ ನೀರು ಸರಬರಾಜಾಗುತ್ತಿರುವ ಗ್ರಾಮಗಳಿಗೆ ಗಮನ ನೀಡಬೇಕು. ವಿಶೇಷವಾಗಿ ಆಯಾ ಗ್ರಾಮಗಳಲ್ಲಿ ಶಾಶ್ವತ ನೀರಿನ ಸಮಸ್ಯೆ ಪರಿಹಾರಕ್ಕೆ ಹಾಗೂ ಜಲಸಂಪನ್ಮೂಲಗಳ ಬಳಕೆಗೆ ಆದ್ಯತೆ ನೀಡಬೇಕು. ಅದರಂತೆ ಖಾಸಗಿ ಬೊರವೆಲ್ಗಳ ಸದ್ಬಳಕೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಟ್ಯಾಂಕರ್ ಮೂಲಕ ಸರಬರಾಜು ಮತ್ತು ಇನ್ನಿತರ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಹಶೀಲ್ದಾರರು, ತಾಲೂಕಾ ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾಯನಿರ್ವಹಿಸದೇ ಇರುವುದರಿಂದ ಅಸಮಾಧಾನ ವ್ಯಕ್ತಪಡಿಸಿದ ಅವರು, ನಿರ್ಲಕ್ಷ್ಯ ತೋರಿದ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಸಹಾಯಕ ಕಾರ್ಯನಿವರ್ಾಹಕ ಅಭಿಯಂತರು ಮತ್ತು ತಾಲೂಕಾ ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ಸೂಚನೆ ನೀಡಿದ ಅವರು, ವಿವಿಧ ಗ್ರಾಮಗಳಿಗೆ ನೀರು ಪೂರೈಕೆ ಕುರಿತಂತೆ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿಗಳು ಕಾಲ-ಕಾಲಕ್ಕೆ ಪರಿಶೀಲನೆ ನಡೆಸುವಂತೆ ಹೇಳಿದರು.
ಕಂದಾಯ ಇಲಾಖೆ ವ್ಯಾಪ್ತಿಯಲ್ಲಿನ ವಿವಿಧ ನ್ಯಾಯಾಲಯ ಪ್ರಕರಣಗಳ ಶೀಘ್ರ ವಿಲೇವಾರಿಗೆ ಗಮನ ನೀಡಬೇಕು. ವಿವಿಧ ವಸತಿ ನಿಲಯಗಳಿಗೆ ಅವಶ್ಯಕತೆ ಇರುವ ನಿವೇಶನ ಸಮಸ್ಯೆಗಳನ್ನು ಆದ್ಯತೆ ಮೇಲೆ ಬಗೆ ಹರಿಸಿ, ಬಡ ವಿದ್ಯಾಥರ್ಿಗಳಿಗೆ ಅನುಕೂಲ ಮಾಡಿಕೊಡಬೇಕು. ಅದರಂತೆ ವಿದ್ಯಾಥರ್ಿಗಳಿಗೆ ಶಿಷ್ಯವೇತನ ಸೌಲಭ್ಯ ದೊರೆಯಲು ಬ್ಯಾಂಕ್ ಖಾತೆಗೆ ಆಧಾರ ಲಿಂಕ್ ಮಾಡುವ ಕುರಿತಂತೆಯೂ ಆಯಾ ಬ್ಯಾಂಕ್ಗಳಿಗೆ ಲೀಡ್ ಬ್ಯಾಂಕ್ ಅಧಿಕಾರಿಗಳ ಮೂಲಕ ನಿದರ್ೇಶನ ನೀಡುವಂತೆ ತಿಳಿಸಿದ ಅವರು, ವಕ್ಫ್ ಆಸ್ತಿಯ ಸಮರ್ಪಕ ಬಳಕೆ, ಭೂಕಂದಾಯ ಮಾರ್ಗಸೂಚಿಯನ್ವಯ ಸಮರ್ಪಕ ಸವರ್ೇ ಕಾರ್ಯ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವಿವಿಧ ನಿಗಮಗಳ ವ್ಯಾಪ್ತಿಯಲ್ಲಿ ಯೋಜನಾವಾರು ಫಲಾನುಭವಿಗಳ ಆಯ್ಕೆ ಕುರಿತಂತೆ ಆಯಾ ಶಾಸಕರಿಗೆ ಗುರಿ ಮಾಹಿತಿಯನ್ನು ಕಳುಹಿಸಿಕೊಡಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಇತ್ತೀಚೆಗೆ ನೇಮಕ ಮಾಡಿಕೊಳ್ಳಲಾದ ಅಂಗನವಾಡಿ ಸಹಾಯಕಿ-ಕಾರ್ಯಕತರ್ೆಯರ ನೇಮಕಾತಿ ನಡೆದ ಬಗ್ಗೆ ಪ್ರಕ್ರಿಯೆ ಪರಿಶೀಲನೆಗೆ ಹಿರಿಯ ಅಧಿಕಾರಿಗಳಿಂದ ವರದಿ ಸಲ್ಲಿಸಬೇಕು. ಜಿಲ್ಲೆಯಲ್ಲಿ ಮೇವು ಬ್ಯಾಂಕ್ ಆರಂಭ, ಹೊರ ರಾಜ್ಯಗಳಿಗೆ ಅಕ್ರಮವಾಗಿ ಮೇವು ಸಾಗಾಣಿಕೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಕ್ರಮವಾಗಿ ಮೇವು ಸಾಗಾಣಿಕೆ ನಿಯಂತ್ರಣಕ್ಕೆ ಚೆಕ್ಪೋಸ್ಟ್ ಸ್ಥಾಪನೆ ಕುರಿತು ಪ್ರಸ್ತಾವನೆ ಸಲ್ಲಿಸಬೇಕು. ವಿವಿಧ ವಸತಿ ಶಾಲೆಗಳ ನಿವೇಶನ ಸಮಸ್ಯೆ ಬಗೆ ಹರಿಸಿಕೊಳ್ಳಬೇಕು. ವಿವಿಧ ಹೊಸ ಪ್ರೌಢಶಾಲಾ ಆರಂಭಕ್ಕೆ ಸಂಬಂಧಪಟ್ಟಂತೆ ಸಕರ್ಾರಿ ನಿವೇಶನಗಳ ಸೂಕ್ತ ಪರಿಶೀಲನೆ ನಡೆಸಿ, ಶಾಲಾ ಕಟ್ಟಡ ನಿಮರ್ಾಣಕ್ಕೆ ಪಡೆಯಬೇಕು. ಗ್ರಾಮ ವಿಕಾಸ ಕಾಮಗಾರಿಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ದಿ ನಿಗಮ ಹಾಗೂ ನಿಮರ್ಿತಿ ಕೇಂದ್ರದಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳ ಕುರಿತಂತೆ ಸೂಕ್ತ ನಿಗಾ ವಹಿಸಬೇಕು. ವಿವಿಧ ಭವನಗಳ, ಶಾದಿ ಮಹಲ್ಗಳ ನಿಮರ್ಾಣಕ್ಕೆ ಸಂಬಂಧಪಟ್ಟಂತೆ ಕೈಗೊಂಡ ಕ್ರಮಗಳ ಬಗ್ಗೆ ಸೂಕ್ತ ನಿಗಾವಹಿಸಬೇಕು. ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಜಿಲ್ಲೆಯಾದ್ಯಂತ ಕಲ್ಪಿಸಿರುವ ನೀರಾವರಿ ಸೌಲಭ್ಯ ಮತ್ತು ಕೆರೆ ಭತರ್ಿ ಕುರಿತಂತೆ ಮಾಹಿತಿ ಒದಗಿಸಬೇಕು. ಸ್ಮಶಾನ ಭೂಮಿಗಳಿಗೆ ಸಂಬಂಧಪಟ್ಟ ನಿವೇಶನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ, ಸಭೆಗೆ ಗೈರಹಾಜರಾಗಿರುವ ಕೊಳಚೆ ನಿಮರ್ೂಲನಾ ಮಂಡಳಿಯ ಸಹಾಯಕ ಕಾರ್ಯನಿವರ್ಾಹಕ ಅಭಿಯಂತರರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ತಿಳಿಸಿದರು.
ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಪಿಂಚಣಿ ಸೌಲಭ್ಯ ಸಕಾಲಕ್ಕೆ ಆಯಾ ಫಲಾನುಭವಿಗಳಿಗೆ ದೊರೆಯುವಂತೆ ನೋಡಿಕೊಳ್ಳಬೇಕು. ಮಧ್ಯವತರ್ಿಗಳ ಮೇಲೆ ನಿಗಾ ಇಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ, ಜಿಲ್ಲಾ ಪಂಚಾಯತ್ ಉಪಕಾರ್ಯದಶರ್ಿ ದುರಗೇಶ ರುದ್ರಾಕ್ಷಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.