ರಾಜ್ಯ ಬಿಜೆಪಿ ತಂಡದಿಂದ ಬರ ವೀಕ್ಷಣೆ

ರಾಜ್ಯ ಬಿಜೆಪಿ ತಂಡದಿಂದ ಬರ ವೀಕ್ಷಣೆ Drought assessment by the state BJP team

ತಾಳಿಕೋಟಿ 31: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೈ ಕೊಟ್ಟದ್ದರಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿ ರೈತಾಪಿ ಜನರು ಸಂಕಷ್ಟದಲ್ಲಿ ಇರುವುದರಿಂದ ಅವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ದೃಷ್ಟಿಯಿಂದ ರಾಜ್ಯ ಬಿಜೆಪಿ ಪಕ್ಷವು ಮುಖಂಡರ ವಿವಿಧ ತಂಡಗಳನ್ನು ರಚಿಸಿ, ಬರ ವೀಕ್ಷಣೆ ಹಾಗೂ ರೈತರಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರ ನಿಮಿತ್ಯವಾಗಿ ಗುರುವಾರ ವಿಧಾನ ಪರಿಷತ್ತಿನ ಸದಸ್ಯರಾದ ಎನ್ ರವಿಕುಮಾರ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪಕ್ಷದ ಮುಖಂಡರೊಂದಿಗೆ ತಾಳಿಕೋಟಿ ತಾಲೂಕಿನ ಮೂಕಿಹಾಳ ಹಾಗೂ ಮಿಣಜಗಿ ಗ್ರಾಮಗಳಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಅವರೊಂದಿಗೆ ಸಂವಾದ ನಡೆಸಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿ ಅವರಲ್ಲಿ ಧೈರ್ಯ ತುಂಬಿದರು.