ವಿಜಯಪುರ ಜಿಲ್ಲೆಯ ನಾಲ್ಕು ತಾಲೂಕುಗಳ ಬರ ಅಧಿಸೂಚನೆ ಶೀಘ್ರ: ಎಂ.ಬಿ. ಪಾಟೀಲ
Drought notification for four taluks in Vijayapura district soon: M.B. Patil
ವಿಜಯಪುರ 20: ಬರ ನಿರ್ವಹಣೆ ಮೌಲ್ಯಮಾಪನ ಮಾನದಂಡಗಳ ಅನ್ವಯ ಜಿಲ್ಲೆಯ ಇಂಡಿ, ಚಡಚಣ, ತಾಳಿಕೋಟೆ ಹಾಗೂ ಮತ್ತೊಂದು ಅರ್ಹ ತಾಲೂಕನ್ನು ಬರಪೀಡಿತ ತಾಲೂಕುಗಳೆಂದು ಪರಿಗಣಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಅಧಿಸೂಚನೆ ಹೊರಡಿಸಲಾಗಿರುವ ನಾಲ್ಕು ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ಕಾರ್ಯವನ್ನು ಸೋಮವಾರದೊಳಗೆ ಪೂರ್ಣಗೊಳಿಸಲಾಗುವುದು. ಇದರ ವರದಿ ಆಧರಿಸಿ ಸರ್ಕಾರದಿಂದ ಅಂತಿಮ ಬರ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ನಿರಂತರ ಮೂರು ವಾರಗಳ ಒಣಹವೆ ಉಪಗ್ರಹ ಮತ್ತು ರಿಮೋಟ್ ಸೆನ್ಸಿಂಗ್ ದತ್ತಾಂಶಗಳ ಆಧಾರದ ಮೇಲೆ ಬರದ ಪರಿಣಾಮವನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಅರ್ಹ ತಾಲೂಕುಗಳನ್ನು ಮಧ್ಯಮ ಅಥವಾ ತೀವ್ರ ಬರಪೀಡಿತ ತಾಲೂಕುಗಳೆಂದು ಗುರುತಿಸಿ, ಸಚಿವ ಸಂಪುಟದ ಉಪಸಮಿತಿಯ ಅನುಮೋದನೆ ಬಳಿಕ ಗ್ರೌಂಡ್ ಟ್ರೂಥಿಂಗ್ಗೆ ಅಧಿಸೂಚನೆ ಹೊರಡಿಸಲಾಗುತ್ತದೆ.
ಗ್ರೌಂಡ್ ಟ್ರೂಥಿಂಗ್ ಆ್ಯಪ್ ಮೂಲಕ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಯಾದೃಚ್ಛಿಕವಾಗಿ ಆಯ್ಕೆಯಾದ ಗ್ರಾಮಗಳ ಸರ್ವೆ ನಂಬರ್ಗಳಲ್ಲಿ ಬೆಳೆ ಹಾನಿಯ ಮೌಲ್ಯಮಾಪನ ನಡೆಸುತ್ತಾರೆ. ಈ ವರದಿ ಆಧರಿಸಿ ತಾಲೂಕುಗಳನ್ನು ಮಧ್ಯಮ ಅಥವಾ ತೀವ್ರ ಬರಪೀಡಿತ ತಾಲೂಕುಗಳೆಂದು ವರ್ಗೀಕರಿಸಲಾಗುತ್ತದೆ. ಜಿಲ್ಲೆಯ ಮೊದಲ ಮತ್ತು ಎರಡನೇ ಪಟ್ಟಿಯಲ್ಲಿದ್ದ ವಿಜಯಪುರ, ಕೊಲ್ಹಾರ, ನಿಡಗುಂದಿ, ಬಸವನ ಬಾಗೇವಾಡಿ,
ಬಬಲೇಶ್ವರ ಹಾಗೂ ತಿಕೋಟಾ ತಾಲೂಕುಗಳಲ್ಲಿ ಗ್ರೌಂಡ್ ಟ್ರೂಥಿಂಗ್ ಪೂರ್ಣಗೊಂಡಿದ್ದು, ಅವುಗಳನ್ನು ಸರ್ಕಾರವು ತೀವ್ರ ಬರಪೀಡಿತ ತಾಲೂಕುಗಳೆಂದು ಅಧಿಸೂಚಿಸಿದೆ. ಸಿಂದಗಿ, ಆಲಮೇಲ, ದೇವರಹಿಪ್ಪರಗಿ ಹಾಗೂ ಮುದ್ದೇಬಿಹಾಳ ತಾಲೂಕುಗಳಿಗೆ ಗ್ರೌಂಡ್ ಟ್ರೂಥಿಂಗ್ಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಪ್ರಕ್ರಿಯೆ ಪ್ರಗತಿಯಲ್ಲಿದೆ. ಸೋಮವಾರದೊಳಗೆ ಈ ಕಾರ್ಯ ಪೂರ್ಣಗೊಳಿಸಿ, ವರದಿ ಆಧರಿಸಿ ಅಂತಿಮ ಬರ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 