ವಿಜಯಪುರ: ಜ.16- ಜಿಲ್ಲೆಯಲ್ಲಿ ಭೀಕರ ಬರ ಇರುವ ಹಿನ್ನಲೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳುವ ಜೊತೆಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ನೀರಿನ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಶಿವಯೋಗಪ್ಪ ನೇದಲಗಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ನಿರ್ವಹಣೆ ಕುರಿತಂತೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಭೀಕರ ಬರ ಇರುವ ಹಿನ್ನಲೆಯಲ್ಲಿ ನೀರಿನ ತೊಂದರೆ ಇರುವ ಕಡೆ, ಅಧಿಕಾರಿಗಳು ಸೂಕ್ತ ಗಮನ ಹರಿಸಬೇಕು. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಜನರಿಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಅದರಂತೆ ಜಾನುವಾರುಗಳಿಗೆ ಮೇವಿನ ಹಾಗೂ ನೀರಿನ ಕೊರತೆಯಾಗದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸಲು ಸೂಕ್ತ ಗಮನ ನೀಡಬೇಕು. ವಿವಿಧ ಗ್ರಾಮಗಳು ನೀರಿನ ಸಮಸ್ಯೆ ಎದುರಿಸುತ್ತಿದ್ದು, ಈಗಾಗಲೇ ರಚಿಸಲಾಗಿರುವ ಟಾಸ್ಕ್ಪೋಸರ್್ ಸಮಿತಿಗಳಡಿಯಲ್ಲಿಯ ಅಧಿಕಾರಿಗಳು ನೀರಿನ ಸಮಸ್ಯೆ ಪರಿಶೀಲಿಸಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಟ್ಯಾಂಕರ್ ನೀರು ಸರಬರಾಜುಗೆ ವಿಳಂಬ ಧೋರಣೆ ಅನುಸರಿಸದಿರಲು ಅವರು ತಿಳಿಸಿದರು.
ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಲು ಪ್ರತಿ ಗ್ರಾಮ ಪಂಚಾಯತ್ವಾರು ಮೇವು ಬ್ಯಾಂಕ್ ಸ್ಥಾಪನೆಗೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಕುರಿತಂತೆ ಮುಂದಿನ ಒಂದು ವಾರಗಳ ಅವಧಿಯಲ್ಲಿ ಪರಿಶೀಲಿಸಿ ವರದಿ ಸಹ ನೀಡುವಂತೆ ತಿಳಿಸಿದ ಅವರು, ಮೇವಿನ ಸಂಗ್ರಹ ಕುರಿತಂತೆ ಪ್ರತಿ ಜಿಲ್ಲಾ ಪಂಚಾಯತ್ ಸದಸ್ಯರಿಗೂ ಮಾಹಿತಿ ಒದಗಿಸುವಂತೆ ತಿಳಿಸಿ, ಒಟ್ಟಾರೆ ಸಮಸ್ಯಾತ್ಮಕ ಗ್ರಾಮಗಳಿಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸಮಸ್ಯೆಯಾಗದಂತೆ ನಿಗಾ ವಹಿಸುವಂತೆ ಸೂಚಿಸಿದರು.
ಜಿಲ್ಲೆಯಿಂದ ಅಕ್ರಮ ಜಾನುವಾರುಗಳ ಸಾಗಾಣಿಕೆ ಮತ್ತು ಮೇವು ಸಾಗಾಣಿಕೆ ಮೇಲೆ ನಿಗಾ ಇಡಬೇಕು. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 700 ಮಲ್ಟಿ ಆಕರ್್ ಚೆಕ್ಡ್ಯಾಂ ನಿಮರ್ಾಣಕ್ಕೆ ಸಂಬಂಧಪಟ್ಟಂತೆ ಬಾಕಿ ಉಳಿದಿರುವ 200 ಚೆಕ್ ಡ್ಯಾಂ ನಿಮರ್ಾಣದ ಪ್ರಸ್ತಾವನೆ ಶೀಘ್ರ ಸಿದ್ಧಪಡಿಸಬೇಕು. ಆಯಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಲು ತಮ್ಮ ಅಧೀನದ ಅಧಿಕಾರಿಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಈ ಸಂದರ್ಭದಲ್ಲಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅವರು, ಜಿಲ್ಲಾ ಪಂಚಾಯತ್ ಸದಸ್ಯರ ಅನುದಾನ ಸಮರ್ಪಕವಾಗಿ ಬಳಕೆಯಾಗುವ ಜೊತೆಗೆ ಮಂಜೂರಾಗಿರುವ ಅನುದಾನ ಲ್ಯಾಪ್ಸ್ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯತ್ವಾರು ತಕ್ಷಣ ಮೇವು ಬ್ಯಾಂಕ್ ಸ್ಥಾಪಿಸುವ ಕುರಿತಂತೆ ಚಿಂತನೆ ನಡೆಸಬೇಕು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೀಘ್ರ ಪೂರ್ಣಗೊಳಿಸುವ ಕುರಿತಂತೆ ತಾಂತ್ರಿಕ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿಕೊಳ್ಳುವಂತೆ ಸಭೆಯಲ್ಲಿ ಸಲಹೆ ನೀಡಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ ಸೇರಿದಂತೆ, ಸ್ಥಾಯಿ ಸಮಿತಿ ಅಧ್ಯಕ್ಷರುಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.