ಬರ ಪರಿಸ್ಥಿತಿ: ರೈತರಿಗೆ ತಕ್ಷಣ ಪರಿಹಾರ ನೀಡಿ ಹಿ ಜಗದೀಶ ಶೆಟ್ಟರ್ ಆಗ್ರಹ
Drought situation: Jagadish Shettar urges immediate relief for farmers
ಲೋಕದರ್ಶನ ವರದಿ
ಸಿಂದಗಿ 04 : ರಾಜ್ಯದಲ್ಲಿ ಮುಂಗಾರು ಹಾಗೂ ಹಿಂಗಾರು ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದ ಜಗದೀಶ ಶೆಟ್ಟರ್ ಆಗ್ರಹಿಸಿದರು. ಸಿಂದಗಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಮಸ್ಯೆಗಳಿಗೆ ಸರ್ಕಾರ ಆದ್ಯತೆ ನೀಡಬೇಕಿತ್ತು. ಆದರೆ ಗ್ಯಾರಂಟಿ ಯೋಜನೆಗಳ ವೆಚ್ಚದಿಂದ ಅಭಿವೃದ್ಧಿ ಕಾರ್ಯಗಳು ಹಿನ್ನಡೆ ಕಂಡಿದ್ದು, ನೀರಿನ ಸಮಸ್ಯೆ, ಬೆಳೆ ನಷ್ಟ ಹಾಗೂ ಗ್ರಾಮೀಣ ಭಾಗದ ಸಂಕಷ್ಟಗಳಿಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅನುದಾನ ದೊರೆತಿದ್ದರೂ, ರಾಜ್ಯ ಸರ್ಕಾರದ ಹಣಕಾಸಿನ ಕೊರತೆಯಿಂದ ಭೂಸ್ವಾಧೀನ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗಿವೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರವನ್ನು ಅನಗತ್ಯವಾಗಿ ಟೀಕಿಸುವ ಬದಲು ಅಭಿವೃದ್ಧಿಗೆ ರಾಜ್ಯ ಸರ್ಕಾರ ಗಮನಹರಿಸಬೇಕು ಎಂದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಶಾಸಕ ರಮೇಶ್ ಭೂಸನೂರು ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 