ಬರ ಪರಿಸ್ಥಿತಿ: ರೈತರಿಗೆ ತಕ್ಷಣ ಪರಿಹಾರ ನೀಡಿ ಹಿ ಜಗದೀಶ ಶೆಟ್ಟರ್ ಆಗ್ರಹ

ಬರ ಪರಿಸ್ಥಿತಿ: ರೈತರಿಗೆ ತಕ್ಷಣ ಪರಿಹಾರ ನೀಡಿ ಹಿ ಜಗದೀಶ ಶೆಟ್ಟರ್ ಆಗ್ರಹ  Drought situation: Jagadish Shettar urges immediate relief for farmers

ಲೋಕದರ್ಶನ ವರದಿ 

ಸಿಂದಗಿ 04 :  ರಾಜ್ಯದಲ್ಲಿ ಮುಂಗಾರು ಹಾಗೂ ಹಿಂಗಾರು ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದ ಜಗದೀಶ ಶೆಟ್ಟರ್ ಆಗ್ರಹಿಸಿದರು.  ಸಿಂದಗಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಮಸ್ಯೆಗಳಿಗೆ ಸರ್ಕಾರ ಆದ್ಯತೆ ನೀಡಬೇಕಿತ್ತು. ಆದರೆ ಗ್ಯಾರಂಟಿ ಯೋಜನೆಗಳ ವೆಚ್ಚದಿಂದ ಅಭಿವೃದ್ಧಿ ಕಾರ್ಯಗಳು ಹಿನ್ನಡೆ ಕಂಡಿದ್ದು, ನೀರಿನ ಸಮಸ್ಯೆ, ಬೆಳೆ ನಷ್ಟ ಹಾಗೂ ಗ್ರಾಮೀಣ ಭಾಗದ ಸಂಕಷ್ಟಗಳಿಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.  

ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅನುದಾನ ದೊರೆತಿದ್ದರೂ, ರಾಜ್ಯ ಸರ್ಕಾರದ ಹಣಕಾಸಿನ ಕೊರತೆಯಿಂದ ಭೂಸ್ವಾಧೀನ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗಿವೆ ಎಂದು ಆರೋಪಿಸಿದರು. ಕೇಂದ್ರ ಸರ್ಕಾರವನ್ನು ಅನಗತ್ಯವಾಗಿ ಟೀಕಿಸುವ ಬದಲು ಅಭಿವೃದ್ಧಿಗೆ ರಾಜ್ಯ ಸರ್ಕಾರ ಗಮನಹರಿಸಬೇಕು ಎಂದರು.  ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಶಾಸಕ ರಮೇಶ್ ಭೂಸನೂರು ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.