ಎರಡನೇ ದಿನವೂ ಬರಪರಿಸ್ಥಿತಿ ಪರೀಶೀಲನೆ
Drought situation assessment continues for the second day
ಲೋಕದರ್ಶನ ವರದಿ
ವಿಜಯಪುರ 10: ಜಿಲ್ಲೆಯಲ್ಲಿ ಎದುರಾಗಿರುವ ತೀವ್ರ ಬರಪರಿಸ್ಥಿತಿ ಹಾಗೂ ಬೆಳೆ ಹಾನಿ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಡಾ. ಎಂ. ಬಿ. ಪಾಟೀಲ ಅವರು ಎರಡನೇ ದಿನವೂ ತಮ್ಮ ವೀಕ್ಷಣಾ ಪ್ರವಾಸವನ್ನು ಮುಂದುವರಿಸಿದ್ದಾರೆ. ಸೋಮವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಂತರ, ಸಚಿವರು ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮಕ್ಕೆ ಭೇಟಿ ನೀಡಿ ರೈತರ ಕಷ್ಟ-ಸುಖಗಳನ್ನು ಆಲಿಸಿದರು.
ತೊಗರಿ,ಮೆಕ್ಕೆಜೋಳ ಹಾಗೂ ಈರುಳ್ಳಿ ಬೆಳೆ ವೀಕ್ಷಣೆ ಮಾಡಿದರು ಬೆಳೆಗಳ ಬೆಳವಣಿಗೆ ಕುಂಠಿತಗೊಂಡು ಸಂಕಷ್ಟಕ್ಕೆ ಈಡಾಗಿರುವ ರೈತರ ಪರಿಸ್ಥಿತಿ ಕಂಡು ಸಚಿವರು ಕಳವಳ ವ್ಯಕ್ತಪಡಿಸಿದರು. ಸಂಕಷ್ಟದಲ್ಲಿರುವ ಅನ್ನದಾತರಿಗೆ ಸರ್ಕಾರದಿಂದ ಗರಿಷ್ಠ ಮಟ್ಟದ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ, ಅಗತ್ಯವಿರುವ ವೈಜ್ಞಾನಿಕ ವರದಿಯನ್ನು ಆದಷ್ಟು ಬೇಗ ಸಿದ್ಧಪಡಿಸಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು. ಈ ಪರೀಶೀಲನಾ ಪ್ರವಾಸದ ವೇಳೆ ನಾಗಠಾಣ ಶಾಸಕರಾದ ವಿಠ್ಠಲ ಕಟಕಧೋಂಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್, ಜಂಟಿ ಕೃಷಿ ನಿರ್ದೇಶಕರಾದ ಶಿವನಗೌಡ ಪಾಟೀಲ ಹಾಗೂ ಕೃಷಿ ಮತ್ತು ಕಂದಾಯ ಇಲಾಖೆಯ ವಿವಿಧ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 