ನಶಾ ಮುಕ್ತ ಭಾರತ ಅಭಿಯಾನ: ನೇರ ಫೋನ್-ಇನ್ ಕಾರ್ಯಕ್ರಮ
ಬೆಳಗಾವಿ 14: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್‌ಇ ವಿಶ್ವವಿದ್ಯಾಲಯ ಬೆಳಗಾವಿ ಮತ್ತು ಕೆಎಲ್‌ಇ ಸಂಸ್ಥೆಯ ಬಿ. ಎಮ್. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಬೆಳಗಾವಿ ಇವರ ಸಹಯೋಗದಲ್ಲಿ “ನಶಾ ಮುಕ್ತ ಭಾರತ ಅಭಿಯಾನ” ಅಂಗವಾಗಿ ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗುರುವಾರ ದಿ. 14ನೇ ಅಗಷ್ಟ್ 2025 ರಂದು ನಡೆದ ಕಾರ್ಯಕ್ರಮದಲ್ಲಿ ಮದ್ಯ ಮತ್ತು ಮಾದಕ ದ್ರವ್ಯ ವ್ಯಸನದ ಕುರಿತು ಪ್ರಶ್ನೋತ್ತರ ಮೂಲಕ ಜನಜಾಗೃತಿ ಮೂಡಿಸಲಾಹಿತು. ಕಾರ್ಯಕ್ರಮದಲ್ಲಿ ಬೆಳಗಾವಿಯ ಕೆಎಲ್‌ಇ ಬಿ. ಎಮ್. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಮತ್ತು ಪ್ರಾಚಾರ್ಯರಾದ ಡಾ. ಸುಹಾಸ ಕುಮಾರ ಶೆಟ್ಟಿ ಅವರು ಭಾಗವಹಿಸಿ ನಶಾ ಮುಕ್ತ ಭಾರತ ಅಭಿಯಾನದ ಉದ್ದೇಶ ಮತ್ತು ಮಹತ್ವದ ಕುರಿತು ಮಾಹಿತಿ ಹಂಚಿಕೊಂಡರು.
ದೇಶದಲ್ಲೆಡೆ ಹೆಚ್ಚುತ್ತಿರುವ ಮದ್ಯಪಾನ, ಧೂಮಪಾನ ಮತ್ತು ಡ್ರಗ್ಸ್ ಸೇವನೆಗಳನ್ನು ಕಡಿಮೆ ಮಾಡಲು ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಮದ್ಯ ಮತ್ತು ಮಾದಕ ದ್ರವ್ಯ ವ್ಯಸನದ ಲಕ್ಷಣಗಳು, ಕಾರಣಗಳು, ಚಿಕಿತ್ಸೆ ಮತ್ತು ಮದ್ಯವ್ಯಸನಿಗಳು ಪುನಃಶ್ಚೇತರಿಸಿಕೊಳ್ಳುವುದು ಹೇಗೆ ಎಂಬುದರ ಕುರಿತು ಜಾಗೃತಿ ಮೂಡಿಸಿದರು. ಕೆಎಲ್‌ಇ ಶ್ರೀ ಬಿ. ಎಮ್. ಕಂಕಣವಾಡಿ ಆಯುರ್ವೇದ ಆಸ್ಪತ್ರೆಯಲ್ಲಿ ಮದ್ಯವ್ಯಸನಿಗಳಿಗೆ ಲಭ್ಯವಿರುವ ಚಿಕಿತ್ಸೆಗಳು ಮತ್ತು ಸಮಾಲೋಚನೆ ಕುರಿತು ಮಾಹಿತಿ ಹಂಚಿಕೊಂಡರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 