ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ
Drug Free India Campaign Program
ಹುಬ್ಬಳ್ಳಿ ಆ.13: ಇಂದು ನಗರದ ಲ್ಯಾಮಿಂಗ್ಟನ್ ಬಾಲಕಿಯರ ಪ್ರೌಢಶಾಲೆಯಲ್ಲಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಬಿಐಇಆರ್‌ಟಿ ಕೆ.ಎಂ.ಗದಗೇರಿ ಮಾತನಾಡಿ, ಭಾರತ ದೇಶದಲ್ಲಿ ಹೆಚ್ಚಾಗಿ ಯುವಕರು ಇದ್ದಾರೆ. ಇಂದು ಯುವಕರು ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಮಾದಕ ವಸ್ತುಗಳನ್ನು ಬಳಸದಂತೆ ಯುವಕರಿಗೆ ತಿಳಿ ಹೇಳಬೇಕಿದೆ. ಆ ನಿಟ್ಟಿನಲ್ಲಿ ಇಂದು ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಸದೃಢ ದೇಶ ಕಟ್ಟಲು ಯುವಕರ ಕೊಡುಗೆ ಅವಶ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಪ್ರಮಾಣ ವಚನವನ್ನು ವಿದ್ಯಾರ್ಥಿಗಳು ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಎಂ.ಆರ್.ಡಬ್ಲೂ ಮಾಂತೇಶ ಕುರ್ತಕೋಟಿ, ಮುಖ್ಯೋಪಾಧ್ಯಾಯನಿ ಸುಮಂಗಲಾ ಶೇಟ, ಕೆ.ಪಿ.ಪುಲಾನೇಕರ, ಸುಜಾತ ಅಗಡಿ, ವಿ.ಎಸ್.ಕರ್ಲವಾಡ, ಶಾಲೆಯ ಸಿಬ್ಬಂದಿ, ವಿದ್ಯಾರ್ಥಿಗಳು ಇತರರು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 