ಮಾದಕ ವಸ್ತುಗಳ ನಿಷೇಧ ಜಾಗೃತಿ ಅಭಿಯಾನ: ಬೃಹತ್ ಜಾತಾ
Drug prohibition awareness campaign:Rally
ತಾಳಿಕೋಟಿ 27: ವಿಜಯಪುರ ಜಿಲ್ಲಾ ಪೊಲೀಸ್, ಬಸವನ ಬಾಗೇವಾಡಿ ಉಪವಿಭಾಗ ಹಾಗೂ ತಾಳಿಕೋಟಿ ಪೊಲೀಸ್ ಠಾಣೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ನಿಷೇಧ ಜಾಗೃತಿ ಅಭಿಯಾನದ ಅಂಗವಾಗಿ ಗುರುವಾರ ಶಾಲಾ ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾತಾ ಹಮ್ಮಿಕೊಳ್ಳಲಾಯಿತು.
ಜಾತಾಕ್ಕೆ ತಹಸಿಲ್ದಾರ್ ಡಾ.ವಿನಯಾ ಹೂಗಾರ ಚಾಲನೆ ನೀಡಿದರು. ಪಟ್ಟಣದ ಶರಣಮುತ್ಯಾ ದೇವಸ್ಥಾನದಿಂದ ಆರಂಭವಾದ ಜಾತಾದಲ್ಲಿ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕೈಯಲ್ಲಿ ಮಾದಕ ವಸ್ತುಗಳ ಸೇವನೆಯ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೈಯಲ್ಲಿ ಹ್ಯಾಂಡ್ ಪೋಸ್ಟರ್ಸ್‌ಗಳನ್ನು ಹಿಡಿದುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಖಾಸ್ಗತೇಶ್ವರ ಸಭಾಭವನಕ್ಕೆ ತಲುಪಿದರು. ಅಲ್ಲಿ ವೇದಿಕೆ ಕಾರ್ಯಕ್ರಮ ಜರಗಿತು.
ಶಿಕ್ಷಕ ಗುಂಡೂರಾವ ಧನಪಾಲ ಅವರು ಮಾತನಾಡಿ ನಶೆ ತರುವ ವಸ್ತುಗಳ ಸೇವನೆಯಿಂದ ಮನುಷ್ಯನ ಆರೋಗ್ಯ ಶಾಂತಿ ನೆಮ್ಮದಿ ಕಳೆದುಕೊಳ್ಳುತ್ತಾನೆ. ಆದ್ದರಿಂದ ಮಾದಕ ವ್ಯಸನಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು. ಪಿಎಸ್‌ಐ ರಾಮನಗೌಡ ಸಂಕನಾಳ, (ಅ.ವಿ.)ಆರ್.ಎಸ್.ಭಂಗಿ, ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಚಾರ್ಯರು ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 