ಕುಡಿದ ಮತ್ತಿನಲ್ಲಿ ಹೆಂಡತಿಯ ತೆಲೆಬೋಳಿಸಿದ ಗಂಡ
Drunk husband shaves wife's hair
ಜಮಖಂಡಿ 08: ತಾಲೂಕಿನ ಕಡಕೋಳ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಗಂಡ ತನ್ನ ಹೆಂಡತಿಯ ಅರ್ಧ ತೆಲೆಬೋಳಿಸಿದ ಘಟನೆ ನಡೆದಿದೆ.
ಗಂಡ ಬಸಪ್ಪ ದೇವರವರ ಹಾಗೂ ಹೆಂಡತಿ ಶ್ರೀದೇವಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಲೇ ಇತ್ತು. ಗಂಡನ ನಡವಳಿಕೆಯಿಂದ ಬೇಸತ್ತಿದ್ದ ಹೆಂಡತಿ ಶ್ರೀದೇವಿ ತವರ ಮನೆ ಸೇರಿದ್ದಳು. ಎರಡು ತಿಂಗಳ ಬಳಿಕ ಸಖಿ ತಂಡದವರು ಆಪ್ತ ಸಮಾಲೋಚನೆ ನಡೆಸಿ ಶ್ರೀದೇವಿಯನ್ನು ಗಂಡನ ಮನೆಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದರು ಎನ್ನಲಾಗಿದೆ.
ಆದರೆ ಗಂಡ ಬಸಪ್ಪ ದೇವರವರ ರಾತ್ರಿ ಮತ್ತೆ ಕುಡಿದು ಬಂದು. ಹೆಂಡತಿಯೊಂದಿಗೆ ಜಗಳಕ್ಕೆ ಮುಂದಾಗಿದ್ದಾನೆ. ಅದು ವಿಕೋಪಕ್ಕೆ ತೆರಳಿ ಆಕೆಯ ಅರ್ಧ ತಲೆಬೋಳಿಸಿದ್ದಾನೆ. ಹೆಂಡತಿ ಶ್ರೀದೇವಿ ಬಾಗಲಕೋಟ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾಳೆಂದು ಸಾರ್ವಜನಿಕರಿಂದ ಮಾಹಿತಿ ತಿಳಿದು ಬಂದಿರುತ್ತದೆ.
ಈ ಕುರಿತು ಗ್ರಾಮೀಣ ಪೋಲಿಸರು ತನಿಖೆಯನ್ನು ಮುಂದುವರಿಸಿದ್ದಾರೆಂದು ಮಾಹಿತಿ ಲಭ್ಯವಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 