ಕೊರೊನಾ ಸೋಂಕು ಭೀತಿ ಹಿನ್ನೆಲೆ: ಬಿಎಂಟಿಸಿಯಲ್ಲಿ ಉಸ್ತುವಾರಿಗಳ ನೇಮಕ

ಬೆಂಗಳೂರು, ಜೂ.28: ಜಾಗತಿಕ ಮಟ್ಟದಲ್ಲಿ ವ್ಯಾಪಕವಾಗಿ ಕೊರೋನಾ ಸೋಂಕು ಹರಡುತ್ತಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿಯೂ ಸಹ ಹಲವಾರು ಘಟಕಗಳಲ್ಲಿ ನಮ್ಮ ಸಿಬ್ಬಂದಿ ಸಹ ಕೊರೊನಾ ವೈರಸ್‌ಗೆ ತುತ್ತಾಗುತ್ತಿದ್ದಾರೆ.ಘಟಕಗಳಲ್ಲಿ, ಕಾರ್ಯಾಗಾರಗಳಲ್ಲಿ ಬಸ್ ನಿಲ್ದಾಣಗಳಲ್ಲಿ ಮತ್ತು ಕೇಂದ್ರ ಕಚೇರಿಯಲ್ಲಿ ಸಿಬ್ಬಂದಿಗೆ ಕೊರೊನಾ ವೈರಸ್‌ ಹರಡಿರುವ ಬಗ್ಗೆ ಮಾಹಿತಿ ಬಂದಲ್ಲಿ ಅಥವಾ ಲಕ್ಷ್ಮಣಗಳು ಕಂಡುಬಂದಲ್ಲಿ, ಸಂಸ್ಥೆಯ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ (7760991787) ಹಾಗೂ ಮುಖ್ಯ ವೈದ್ಯಾಧಿಕಾರಿ (7760991390) ದೂರವಾಣಿ ಮುಖಾಂತರ ಸಂಪರ್ಕಿಸಬೇಕು.

ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿಗಳು ಹಾಗೂ ಮುಖ್ಯ ವೈದ್ಯಾಧಿಕಾರಿಗಳು ಸಿಬ್ಬಂದಿಗೆ ಸೂಕ್ತ ನೆರವು ನೀಡಲಿದ್ದಾರೆ. ಈ ವಿಷಯವನ್ನು ಎಲ್ಲಾ ಘಟಕಗಳಲ್ಲಿ, ಕಾರ್ಯಾಗಾರಗಳಲ್ಲಿ, ಬಸ್‌ ನಿಲ್ದಾಣಗಳಲ್ಲಿ ಮತ್ತು ಕೇಂದ್ರ ಕಚೇರಿಯಲ್ಲಿ ಸೂಚನಾ ಫಲಕದಲ್ಲಿ ಪ್ರದರ್ಶಿಸುವಂತೆ ಸೂಚಿಸಲಾಗಿದೆ.ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿಯವರು ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದು, ಅವರ ಆರೋಗ್ಯದ ಪರಿಸ್ಥಿತಿಯನ್ನು ತಿಳಿದುಕೊಂಡು ಪ್ರತಿ ದಿನ ನಿರ್ದೇಶಕರ ಗಮನಕ್ಕೆ ತರಬೇಕು ಎಂದು ಬಿಎಂಟಿಸಿ ನಿರ್ದೇಶಕರಾದ ಡಾ.ಕೆ.ಅರುಣ್ ಸೂಚಿಸಿದ್ದಾರೆ.