ದುರುಗಮ್ಮ ದೇವಿ ದೇವಸ್ಥಾನ ಗೋಪುರ ಕಳಸಾರೋಹಣಉಜ್ಜಯಿನಿ ಶ್ರೀ ಗಳ ಅಡ್ಡ ಪಲ್ಲಕ್ಕಿ ಮಹೋತ್ಸವ
Durugamma Devi Temple Gopuram Kalasarohana Ujjayini Sri Gala Addha Palanki Mahotsav
ಲೋಕದರ್ಶನ ವರದಿ
ಹೂವಿನಹಡಗಲಿ 8: ತಾಲ್ಲೂಕಿನ ಸೋಗಿ ಗ್ರಾಮದ ಎ.ಕೆ.ಕಾಲೋನಿಯಲ್ಲಿ ದುರುಗಮ್ಮನ ದೇವಾಲಯದ ಗೋಪಾರ ಕಳಸಾರೋಹಣ ನಿಮಿತ್ತ ಶ್ರೀ ಉಜ್ಜಯಿನಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಮಹೋತ್ಸವ ಮಂಗಳವಾರ ವಿಜೃಂಭಣೆಯಿಂದ ಜರುಗಿತು. ಸಮಾಳ, ನಂದಿಕೋಲು ಮಂಗಳವಾದ್ಯಗಳೊಂದಿಗೆ ಗ್ರಾಮದ ಮುಖ್ಯ ಬೀದಿಯ ಮೂಲಕ ವೈಭವದಿಂದ ಸಾಗಿದ ಉತ್ಸವ ದುರುಗಮ್ಮ ದೇವಸ್ಥಾನ ಬಳಿ ಸಂಪನ್ನಗೊಂಡಿತು. ಮಹಿಳೆಯರು ಪೂರ್ಣಕುಂಭ, ಕಳಸದೊಂದಿಗೆ ಪಾಲ್ಗೊಂಡಿದ್ದರು. ಗ್ರಾಮದ ಭಕ್ತರು ಭಾಗವಹಿಸಿದ್ದರು. ಶ್ರೀ ಮದ್ ಉಜ್ಜಯಿನಿ ಸದ್ಧರ್ಮ ಸಿಂಹಾಸನಾದೀಶ್ವರ ಶ್ರೀ 1008 ಜಗದ್ಗುರು ಶ್ರೀ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗತ್ಪಾದರರ ಅಡ್ಡ ಪಲ್ಲಕ್ಕಿ ಉತ್ಸವವು ಎಲ್ಲಾ ಶ್ರೀ ಗಳ ಸಮ್ಮುಖದಲ್ಲಿ ನಡೆಯಿತು. ನಾನಾ ಮಠಾಧೀಶರ ಸಾನ್ನಿ-ಧ್ಯದಲ್ಲಿ ದುರುಗಮ್ಮ ದೇವಿ ದೇವಸ್ಥಾನ ಗೋಪುರ ಕಳಸಾರೋಹಣ ನೆರವೇರಿಸಿದರು.
ಉಜ್ಜಯಿನಿ ಶ್ರೀಗಳ ಸಾನ್ನಿಧ್ಯ ದಲ್ಲಿ ಧರ್ಮಸಭೆ ಜರುಗಿತು. ಸೋಗಿಯಎ.ಎಂ.ಹಾಲಯ್ಯ ಶಾಸ್ತ್ರಿ ವೇದಘೋಷ ನಡೆಸಿದರು.ನಂದಿಪುರ ಪುಣ್ಯಕ್ಷೇತ್ರದ ಮಹೇಶ್ವರ ಸ್ವಾಮೀಜಿ, ಮಲ್ಲನಕೆರೆ ಮಠದ ಚನ್ನಬಸವ ಸ್ವಾಮೀಜಿ, ಹಂಪಸಾಗರದ ಶಿವಲಿಂಗ ರುದ್ರಮುನಿ ಸ್ವಾಮೀಜಿ, ಹೊನ್ನಾಳಿ ಹಿರೇಕಲ್ಮಠದ ಒಡೆಯರ್ಚನ್ನಮಲ್ಲಿಕಾರ್ಜುನ ಸ್ವಾಮೀಜಿ, ಸೋಗಿ ಪುರವರ್ಗ ಕಟ್ಟಿಮನಿ ಮಠದ ಅಭಿನವ ಸಿದ್ದವೀರ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸಿದ್ದರು. ಮುಖಂಡರಾದ ಎಂ.ಬಿ.ಬಸವರಾಜ, ಕೊಟ್ರ್ಪ, ಕರಿಬಸಪ್ಪ, ನಾಗರಾಜ, ದುರುಗಪ್ಪ, ಹುಚ್ಚಪ್ಪ ಕೊಟ್ರೇಶ ಇದ್ದರು. ಧಾರ್ಮಿಕ ಕಾರ್ಯಕ್ರಮ ದಲ್ಲಿ ನಂದಿಪುರದ ಮಹೇಶ್ವರ ಸ್ವಾಮೀಜಿ, ಹಿರೇಮಲ್ಲನಕೇರಿ ಮಠದ ಅಭಿನವ ಚನ್ನಬಸವ ಸ್ವಾಮೀಜಿ, ಹಂಪಸಾಗರದ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಸ್ವಾಮೀಜಿ, ದೇಗುಲದ ಅದ್ಯಕ್ಷರು, ಪದಾಧಿಕಾರಿಗಳು, ಊರಿನ ಮುಖಂಡರು ಭಾಗವಹಿಸಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 