ಕರ್ನಾಟಕದಲ್ಲಿ ಕರ್ತವ್ಯ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ
Duty revolution in Karnataka: A new step in indigenous AI technology
ಲೋಕದರ್ಶನ ವರದಿ
ಕಾರವಾರ 15:- ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’ ಎಂಬ ನೂತನ ಮುಂದುವರಿದ ಹಾಜರಾತಿ ನಿರ್ವಹಣಾ ತಂತ್ರಜ್ಞಾನವನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ 100ಅ ಹಾಜರಿರಬೇಕು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದರು. ಈ ಹಿಂದೆ ಜಾರಿಯಲ್ಲಿದ್ದ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಉದ್ಯೋಗಿಗಳು ಕೇವಲ ಡಿಜಿಟಲ್ ಸಹಿ ಮಾಡಿ ಕಚೇರಿಯಿಂದ ಗೈರಾಗುವ ಸಾಧ್ಯತೆಗಳಿದ್ದವು. ಈ ದೋಷವನ್ನು ನಿವಾರಿಸಲು, ಉದ್ಯೋಗಿಗಳ ಭೌತಿಕ ಉಪಸ್ಥಿತಿ ಮತ್ತು ಕಚೇರಿಯ ಭೌಗೋಳಿಕ ಸ್ಥಳವನ್ನು ನಿಖರವಾಗಿ ಪತ್ತೆಹಚ್ಚುವ ಈ ಹೊಸ ವ್ಯವಸ್ಥೆಯನ್ನು ರೂಪಿಸಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 