ಕರ್ನಾಟಕದಲ್ಲಿ ಕರ್ತವ್ಯ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ

ಕರ್ನಾಟಕದಲ್ಲಿ ಕರ್ತವ್ಯ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ Duty revolution in Karnataka: A new step in indigenous AI technology

ಲೋಕದರ್ಶನ ವರದಿ 

ಕಾರವಾರ 15:- ರಾಜ್ಯ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರವು ‘ಕರ್ತವ್ಯ’  ಎಂಬ ನೂತನ ಮುಂದುವರಿದ ಹಾಜರಾತಿ ನಿರ್ವಹಣಾ ತಂತ್ರಜ್ಞಾನವನ್ನು ಜಾರಿಗೆ ತಂದಿದೆ.  ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ನಡೆಸಿದ ಮೊದಲ ಸಭೆಯಲ್ಲೇ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ಕಡ್ಡಾಯವಾಗಿ 100ಅ ಹಾಜರಿರಬೇಕು ಮತ್ತು ಸಾರ್ವಜನಿಕರ ಕುಂದುಕೊರತೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದರು.  ಈ ಹಿಂದೆ ಜಾರಿಯಲ್ಲಿದ್ದ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಉದ್ಯೋಗಿಗಳು ಕೇವಲ ಡಿಜಿಟಲ್ ಸಹಿ ಮಾಡಿ ಕಚೇರಿಯಿಂದ ಗೈರಾಗುವ ಸಾಧ್ಯತೆಗಳಿದ್ದವು. ಈ ದೋಷವನ್ನು ನಿವಾರಿಸಲು, ಉದ್ಯೋಗಿಗಳ ಭೌತಿಕ ಉಪಸ್ಥಿತಿ ಮತ್ತು ಕಚೇರಿಯ ಭೌಗೋಳಿಕ ಸ್ಥಳವನ್ನು  ನಿಖರವಾಗಿ ಪತ್ತೆಹಚ್ಚುವ ಈ ಹೊಸ ವ್ಯವಸ್ಥೆಯನ್ನು ರೂಪಿಸಲಾಗಿದೆ.