ನರೇಗಾ ಕಾರ್ಮಿಕರಿಗೆ ಇ-ಕೆವೈಸಿ ಕಡ್ಡಾಯ: ಇಒ ಚೆಲುವಯ್ಯ
E-KYC mandatory for NREGA workers: EO Cheluvaiah
ನರೇಗಾ ಕಾರ್ಮಿಕರಿಗೆ ಇ-ಕೆವೈಸಿ ಕಡ್ಡಾಯ: ಇಒ ಚೆಲುವಯ್ಯ
ದೇವರಹಿಪ್ಪರಗಿ 18: ತಾಲ್ಲೂಕಿನ 14 ಗ್ರಾಮ ಪಂಚಾಯಿತಿಗಳ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್ಗಳಲ್ಲಿರುವ ಎಲ್ಲಾ ಸದಸ್ಯರು ಸೆಪ್ಟೆಂಬರ್ 30ರ ಒಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ ತಿಳಿಸಿದ್ದಾರೆ.ತಾಲೂಕಿನ ಚಿಕ್ಕರೂಗಿ ಗ್ರಾ.ಪಂ ವ್ಯಾಪ್ತಿಯಲ್ಲಿ ಶನಿವಾರದಂದು ಇ-ಕೆವೈಸಿ ಅಭಿವ ಅಭಿಯಾನದಲ್ಲಿ ಮಾತನಾಡಿದರು. ನಂತರ ಗ್ರಾಮದ ಸಂತೆಯಲ್ಲಿ ಪಿಡಿಒ ಶಿವಾನಂದ ಮೂಲಿಮನಿ ಹಾಗೂ ಐಇಸಿ ಸಂಯೋಜಕ ಸಿದ್ದು ಕಾಂಬಳೆ ಅವರ ನೇತೃತ್ವದಲ್ಲಿ ಸುಮಾರು ನೂರಕ್ಕೂ ಹೆಚ್ಚು ಕೂಲಿಕಾರರ ಇ-ಕೆವೈಸಿ ಮಾಡುವ ಮೂಲಕ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 14 ಗ್ರಾಪಂ ಗಳ ಪೈಕಿ 16995 ಸಕ್ರಿಯ ಉದ್ಯೋಗ ಕಾರ್ಡುಗಳಿದ್ದು.
ಅದರಲ್ಲಿ ಈಗಾಗಲೇ 2808 ಇ-ಕೆವೈಸಿ ಮಾಡಲಾಗಿದೆ. ಮಣೂರ-2387, ಜಾಲವಾದ-1879 ಹಾಗೂ ಹುಣಶ್ಯಾಳ-1708 ಉದ್ಯೋಗ ಕಾರ್ಡಗಳಿದ್ದು. ಬಾಕಿ ಇರುವ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಹಾಗೂ ಪಿಡಿಓ ಅವರು ಹೆಚ್ಚಿನ ಗಮನ ನೀಡಬೇಕು ಎಂದು ಮೇಲಾಧಿಕಾರಿಗಳು ತಿಳಿಸಿದ್ದಾರೆ.ಗ್ರಾಮೀಣ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕರಾದ ಶಾಂತಗೌಡ ನ್ಯಾಮಣ್ಣವರ ಅವರು ಮಾತನಾಡಿ, ಮನರೇಗಾ ಯೋಜನೆ ಪರಿಣಾಮಕಾರಿ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಇ-ಕೆವೈಸಿ ಮಾಡಲಾಗುತ್ತಿದೆ. ಕೂಲಿ ಕಾರ್ಮಿಕರು ತಮ್ಮ ಕಾರ್ಡುಗಳ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಗ್ರಾಮದ ಪ್ರಮುಖರು ಗಣ್ಯರು ಹಾಗೂ ಗ್ರಾಪಂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 