ಅಬಕಾರಿ ಸನ್ನದುಗಳ ಇ-ಹರಾಜು ಪ್ರಕ್ರಿಯೆಗೆ ಚಾಲನೆ
E-auction process for excise licenses launched
ಬಳ್ಳಾರಿ 13: ರಾಜ್ಯ ಸರ್ಕಾರ ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಎಲ್-2ಎ ಹಾಗೂ ಸಿಎಲ್-9ಎ ಸನ್ನದುಗಳ ಇ-ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹರಾಜಿನಲ್ಲಿ ಭಾಗವಹಿಸುವವರು ಕೇವಲ ಬಳ್ಳಾರಿ ಅಥವಾ ವಿಜಯನಗರ ಜಿಲ್ಲೆಗಳಿಗೆ ಸೀಮಿತರಾಗದೆ ರಾಜ್ಯದ ಯಾವುದೇ ಜಿಲ್ಲೆಯಿಂದ ಬಿಡ್ ಸಲ್ಲಿಸಬಹುದು ಎಂದು ಬಳ್ಳಾರಿ ಜಿಲ್ಲಾ ಅಬಕಾರಿ ಉಪ ಆಯುಕ್ತ ಮಂಜುನಾಥ್ ಎನ್. ತಿಳಿಸಿದ್ದಾರೆ. ರಾಜ್ಯ ಅಬಕಾರಿ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಅಬಕಾರಿ ಇಲಾಖೆಯ ವತಿಯಿಂದ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಆಸಕ್ತ ಬಿಡ್ದಾರರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ರಾಜ್ಯಾದ್ಯಂತ ಸುಮಾರು 483 ಸಿಎಲ್-2ಎ ಹಾಗೂ 90ಕ್ಕೂ ಹೆಚ್ಚು ಸಿಎಲ್-9ಎ ಸನ್ನದುಗಳನ್ನು ಇ-ಹರಾಜು ಮೂಲಕ ನೀಡಲು ಸರ್ಕಾರ ಉದ್ದೇಶಿಸಿದೆ. ಸಿಎಲ್-2ಎ ಪರವಾನಗಿಗಳು ಮದ್ಯ ಮಾರಾಟ ಮಳಿಗೆಗಳಿಗೆ (ವೈನ್ ಸ್ಟೋರ್ಗಳು) ಸಂಬಂಧಿಸಿದವು.ಇಲ್ಲಿ ಖರೀದಿಸಿದ ಮದ್ಯವನ್ನು ಬೇರೆಡೆ ಸೇವಿಸಲು ಮಾತ್ರ ಅವಕಾಶವಿರುತ್ತದೆ. ಸಿಎಲ್-9ಎ ಪರವಾನಗಿಗಳು ಮಹಾನಗರ ಪಾಲಿಕೆ ವ್ಯಾಪ್ತಿಯ ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ಸಂಬಂಧಿಸಿದ್ದು, ಆಹಾರದೊಂದಿಗೆ ಮದ್ಯ ಪೂರೈಕೆಗೆ ಅವಕಾಶ ಕಲ್ಪಿಸುತ್ತವೆ ಎಂದು ವಿವರಿಸಿದರು.
ಬಳ್ಳಾರಿ ಜಿಲ್ಲೆಯಲ್ಲಿ 10 ಸಿಎಲ್-2ಎ ಹಾಗೂ 2 ಸಿಎಲ್-9ಎ ಸನ್ನದುಗಳಿಗೆ ಇ-ಹರಾಜು ನಡೆಯಲಿದೆ. ಹರಾಜಿನಲ್ಲಿ ಭಾಗವಹಿಸಲು ಆಸಕ್ತರು ಎಂಎಸ್ಟಿಸಿ ಅಧಿಕೃತ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಆನ್ಲೈನ್ ವಾಲೆಟ್ನಲ್ಲಿ ಇಎಂಡಿ ಮೊತ್ತವನ್ನು ಜಮಾ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು. ಬಳ್ಳಾರಿ ಜಿಲ್ಲೆಯ ಇ-ಹರಾಜು ಜುಲೈ 28ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದ್ದು, ಆಸಕ್ತರು ಜುಲೈ 26ರೊಳಗೆ ನೋಂದಣಿ ಹಾಗೂ ಶುಲ್ಕ ಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಮೊಬೈಲ್ ಅಥವಾ ಉತ್ತಮ ಇಂಟರ್ನೆಟ್ ಸಂಪರ್ಕವಿರುವ ಡೆಸ್ಕ್ಟಾಪ್ ಅಥವಾ ಲ್ಯಾಪ್ಟಾಪ್ ಮೂಲಕ ಮನೆಯಲ್ಲಿಯೇ ಕುಳಿತು ಆನ್ಲೈನ್ ಬಿಡ್ ಸಲ್ಲಿಸಬಹುದಾಗಿದೆ ಎಂದು ಹೇಳಿದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 