ED ದಾಳಿ : ಮಮತಾ ಹಿಂಬಾಗಿಲ ಪ್ರವೇಶ, ನಿಗೂಢ ದಾಖಲೆ ಶೋಧಕ್ಕೆ ಅಡ್ಡಿ ಅಧಿಕಾರಿಗಳು ಕೋರ್ಟ್ಗೆ ಮೊರೆ
ED raid: Mamata's backdoor entry, officials move court to obstruct search of mysterious documents
ಕೋಲ್ಕತ್ತ: ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಪ್ರಕರಣ ಸಂಬಂಧ ಪಶ್ಚಿಮ ಬಂಗಾಳದ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಲಾಗಿತ್ತು. ಆದರೆ, ಸಿಎಂ ಮಮತಾ ಬ್ಯಾನರ್ಜಿ ಅವರು ಕಾರ್ಯಾಚರಣೆ ವೇಳೆ ಅಕ್ರಮವಾಗಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇನಾಲಯದ (ಇ.ಡಿ) ಅಧಿಕಾರಿಗಳು ಕಲ್ಕತ್ತ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ನ್ಯಾಯಮೂರ್ತಿ ಸುವ್ರಾ ಘೋಷ್ ನೇತೃತ್ವದ ಪೀಠ ಶುಕ್ರವಾರ ಅರ್ಜಿ ವಿಚಾರಣೆ ನಡೆಸಲಿದೆ ಎಂದು ಇ.ಡಿ ಮೂಲಗಳು ತಿಳಿಸಿವೆ.ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಪ್ರಕರಣ ಸಂಬಂಧ ಪಶ್ಚಿಮ ಬಂಗಾಳದ ಆರು ಮತ್ತು ದೆಹಲಿಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದೂ ಇ.ಡಿ ಅಧಿಕಾರಿಗಳು ಹೇಳಿದ್ದಾರೆ.
ಪ್ರಕರಣದ ತನಿಖೆಯ ಭಾಗವಾಗಿ ಐ-ಪ್ಯಾಕ್ ಸಂಸ್ಥೆಯ ಮುಖ್ಯಸ್ಥರು ಆಗಿರುವ ಟಿಎಂಸಿಯ ಐಟಿ ಸೆಲ್ ಮುಖ್ಯಸ್ಥ ಪ್ರತೀಕ್ ಜೈನ್ ಅವರು ಕಚೇರಿ ಹಾಗೂ ಮನೆಯಲ್ಲಿ ಶೋಧ ನಡೆಸಲಾಗಿತ್ತು. ಏತನ್ಮಧ್ಯೆ, ಮಮತಾ ಬ್ಯಾನರ್ಜಿ ಅವರು ಜೈನ್ ನಿವಾಸಕ್ಕೆ ಧಾವಿಸಿ ಭೌತಿಕ ದಾಖಲೆಗಳು, ಹಾರ್ಡ್ ಡಿಸ್ಕ್ ಸೇರಿದಂತೆ ಪ್ರಮುಖ ಸಾಕ್ಷ್ಯಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಇ.ಡಿ ಅಧಿಕಾರಿಗಳು ದೂರಿದ್ದಾರೆ.
‘ಅಕ್ರಮ ಕಲ್ಲಿದ್ದಲು ಗಣಿಗಾರಿಕೆ ಪ್ರಕರಣ ಸಂಬಂಧ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಶೋಧ ಕಾರ್ಯಾಚರಣೆ ನಡೆಸಿದ್ದವು. ಇದನ್ನು ಹೊರತುಪಡಿಸಿ ಯಾವುದೇ ಚುನಾವಣೆ ಅಥವಾ ರಾಜಕೀಯ ಪಕ್ಷದ ಕಚೇರಿ ಮೇಲೆ ದಾಳಿ ನಡೆಸುವ ಉದ್ದೇಶ ನಮಗೆ ಇರಲಿಲ್ಲ’ ಎಂದು ಇ.ಡಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕಾರ್ಯಾಚರಣೆ ವೇಳೆ ಮಮತಾ ಬ್ಯಾನರ್ಜಿ ಅವರು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಅಕ್ರಮವಾಗಿ ಒಳನುಗ್ಗಿ ದಾಖಲೆಗಳನ್ನು ಕಸಿದುಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಮ್ಮ ಪಕ್ಷದ (ಟಿಎಂಸಿ) ದಾಖಲೆಗಳನ್ನು ಸಂಗ್ರಹಿಸುವ ಹುನ್ನಾರದ ಭಾಗವಾಗಿ ಕೇಂದ್ರ ಸರ್ಕಾರ ಈ ದಾಳಿ ನಡೆಸಿದೆ. ಇದು ಗೃಹ ಸಚಿವ ಅಮಿತ್ ಶಾ ಅವರು ಮಾಡಿರುವ ಅತ್ಯಂತ ದುರದೃಷ್ಟಕರ ಕೃತ್ಯವಾಗಿದೆ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಪಕ್ಷದ ದಾಖಲೆಗಳು, ಹಾರ್ಡ್ ಡಿಸ್ಕ್ಗಳು ಸೇರಿದಂತೆ ಪ್ರಮುಖ ಡೇಟಾವನ್ನು ವಶಪಡಿಸಿಕೊಳ್ಳಲು ಇ.ಡಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ .
‘ಈ
ದಾಳಿ ಬೆದರಿಕೆ ಕೃತ್ಯವಾಗಿದೆ. ಜಾರಿ ನಿರ್ದೇನಾಲಯವು ಸಾಂವಿಧಾನಿಕ ಸಂಸ್ಥೆಯಾಗಿ ಉಳಿದಿಲ್ಲ. ಬದಲಾಗಿ, ರಾಜಕೀಯ ಸೇಡು ತೀರಿಸಿಕೊಳ್ಳುವ ಅಸ್ತ್ರವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶವನ್ನು ರಕ್ಷಣೆ ಮಾಡುವ ಬದಲು ಅತ್ಯಂತ ನೀಚ ಗೃಹ ಸಚಿವರಂತೆ ವರ್ತಿಸುತ್ತಿದ್ದಾರೆ’ ಎಂದು ಗುಡುಗಿದ್ದಾರೆ.
ಇ.ಡಿ ದಾಳಿಯು ಕೇಂದ್ರ ಸರ್ಕಾರದ ರಾಜಕೀಯ ದ್ವೇಷದ ಕ್ರಮವಾಗಿದೆ. ಕೇಂದ್ರದ ತನಿಖಾ ಸಂಸ್ಥೆಗಳು ನಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಮತ್ತು ರಹಸ್ಯ ತಂತ್ರಗಾರಿಕೆಯ ದಾಖಲೆಗಳನ್ನು ಕಳ್ಳತನ ಮಾಡಲು ಯತ್ನಿಸುತ್ತಿವೆ ಎಂದೂ ಅವರು ಆರೋಪಿಸಿದ್ದಾರೆ.
ಇ.ಡಿ ಅಧಿಕಾರಿಗಳು ನಮ್ಮ ಪಕ್ಷದ ಹಾರ್ಡ್ ಡಿಸ್ಕ್, ಆಂತರಿಕ ದಾಖಲೆಗಳು ಮತ್ತು ಸೂಕ್ಷ್ಮ ಡೇಟಾವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅವುಗಳಲ್ಲಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ನಮ್ಮ ಅಭ್ಯರ್ಥಿಗಳ ವಿವರಗಳಿವೆ ಎಂದು ಅವರು ಹೇಳಿದ್ದಾರೆ.
ರಾಜಕೀಯ ಪಕ್ಷಗಳ ಐಟಿ ಮುಖ್ಯಸ್ಥರ ಮನೆಗಳ ಮೇಲೆ ದಾಳಿ ಮಾಡುವಂತೆ ನಿರ್ದೇಶನ ನೀಡುವುದೊಂದೇ ಅಮಿತ್ ಶಾ ಅವರ ಕೆಲಸವೇ ಎಂದು ಪ್ರಶ್ನಿಸಿದ ಅವರು, ಇದು ರಾಜಕೀಯ ಸೇಡು ಎಂದು ಕುಟುಕಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 