ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ED shocks Minister Satish Jarkiholi's son-in-law; raids at 6 places including house and office
ಬೆಳಗಾವಿ : ಸಚಿವ ಸತೀಶ್ ಜಾರಕಿಹೊಳಿ ಅಳಿಯ ಹಾಗೂ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ ಮಂಜುನಾಥ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಸಹೋದರಿ ಪತಿ ಆಗಿರುವ ವೈ ಮಂಜುನಾಥ ಅವರ ಬೆಳಗಾವಿಯ ಹನುಮಾನ ನಗರದಲ್ಲಿರುವ ಐಷಾರಾಮಿ ನಿವಾಸ ಸೇರಿ ಒಟ್ಟು ಆರು ಕಡೆಗಳಲ್ಲಿ ದಾಳಿ ಮಾಡಲಾಗಿದೆ.
ಮಂಜುನಾಥ ಅವರು ಸಧ್ಯ ಬೆಳಗಾವಿಯಲ್ಲಿ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾನಾ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ. ಇಡಿ ಅಧಿಕಾರಿಗಳು ಸ್ಥಳೀಯ ಪೊಲೀಸರನ್ನು ದಾಳಿಯಲ್ಲಿ ಬಳಸಿಕೊಳ್ಳದೆ ಕೇಂದ್ರ ಸರಕಾರದ ಅಧೀನದಲ್ಲಿರುವ ಹತ್ತಕ್ಕೂ ಹೆಚ್ಚು ಸಶಸ್ತ್ರ ಅರೇಸೇನಾ ಪಡೆಯ ಬಿಗಿ ಭದ್ರತೆಯಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ.
ಬೆಳಗಾವಿಯ ಅಬಕಾರಿ ಹೆಚ್ಚುವರಿ ಆಯುಕ್ತ ವೈ ಮಂಜುನಾಥ ಅವರ ಮನೆ ಆಪ್ತರ ಬೆಳಗಾವಿ, ಮೈಸೂರು, ಬೆಂಗಳೂರು, ಅರಿಸಿಕೇರೆ ಸೇರಿ ಆರು ಕಡೆ ದಾಳಿ ಮಾಡಲಾಗಿದೆ.ಬೆಂಗಳೂರಲ್ಲಿರುವ ಮಂಜುನಾಥಗೆ ಸೇರಿದ ಅಪಾರ್ಟ್ಮೆಂಟ್ ಮೇಲೆ ದಾಳಿ, ಹಾಸನ ಜಿಲ್ಲೆಯ ಅರಿಸಿಕೇರೆಯಲ್ಲಿರುವ ಮಂಜುನಾಥ ಆಪ್ತನ ಮನೆ ಮೇಲೆ ದಾಳಿ,
ಅಥಣಿ ತಾಲೂಕಿನ ಐನಾಪುರ ಗ್ರಾಮದಲ್ಲಿರುವ ವೈ ಮಂಜುನಾಥ ಸ್ನೇಹಿತನ ಮನೆ ಮೇಲೆ ದಾಳಿಸತೀಶ್ ಜಾರಕಿಹೊಳಿ ಬಾಮೈದ ಆಗಿರುವ ವೈ ಮಂಜುನಾಥ ಬಳ್ಳಾರಿ ಮಾಜಿ ಸಂಸದ ದೇವೇಂದ್ರಪ್ಪ ಪುತ್ರರಾಗಿರುವ ಮಂಜುನಾಥ ಬೇನಾಮಿ ಹೆಸರಲ್ಲಿ ಜಮೀನು, ಬಾರ್, ರೆಸ್ಟೋರೆಂಟ್ ಸೇರಿ ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಾಗಿದೆ. ಸದ್ಯ ಬೆಂಗಳೂರಿನ ಅಪಾರ್ಟ್ಮೆಂಟ್‌ನಲ್ಲಿರುವ ವೈ ಮಂಜುನಾಥ ಅಪಾರ್ಟ್ಮೆಂಟ್ ಮೇಲೂ ಬೆಂಗಳೂರು ಇಡಿ ಅಧಿಕಾರಿಗಳ ದಾಳಿ ಮಾಡಿದ್ದಾರೆ.
ಸತೀಶ ಜಾರಕಿಹೊಳಿ ಸಂಬಂಧಿ ವೈ ಮಂಜುನಾಥ ಕೊನೆಗೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಸಮಿಟ್ ಅಪಾರ್ಟ್ಮೆಂಟ್‌ನಲ್ಲಿ ಮಂಜುನಾಥ ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ, ಬೆಂಗಳೂರು ಸೇರಿ ವೈ ಮಂಜುನಾಥಗೆ ಸೇರಿದ ಮನೆ, ಆಪ್ತರ ಆರು ಕಡೆ ದಾಳಿಯಾಗಿದೆ. ಬೆಳಗಾವಿಯ ದೂರದರ್ಶನ ನಗರಕ್ಕೆ ಇಡಿ ಡಿವೈಎಸ್‌ಪಿ ದರ್ಜೆ ಅಧಿಕಾರಿ ಭೇಟಿ ನೀಡಿ ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ.
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ 