ಬೆಂಗಳೂರು, ಸೆ 15 ದೆಹಲಿ ನಿವಾಸದಲ್ಲಿ ದೊರೆತ 8.69 ಕೋಟಿ ರೂ. ಅಕ್ರಮ ಹಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಮುಖಂಡ, ಶಾಸಕ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಮೇಲ್ಮನವಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ಪೀಠ ಸೋಮವಾರ ವಾದ ಪ್ರತಿವಾದ ಪ್ರತಿವಾದ ಆಲಿಸಿತು. ಪ್ರಕರಣ ಸಂಬಂಧ ಮಂಗಳವಾರ ತೀಪು ಹೊರಬೀಳುವ ಸಾಧ್ಯತೆಯಿದೆ.
ವಿಚಾರಣೆ ವೇಳೆ ಇ.ಡಿ ಪರ ವಕೀಲರು, ಹೈಕೋರ್ಟ್ ಏಕಸದಸ್ಯ ಪೀಠ ಸೆಕ್ಷನ್ 482 ಅಡಿಯಲ್ಲಿ ತೀಪು ನೀಡಿರುವುದರಿಂದ ಅದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿಯೇ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ. ಆದ್ದರಿಂದ ಅಜರ್ಿಯನ್ನು ವಜಾಗೊಳಿಸಬೇಕು ಎಂದು ಮನವಿ ಮಾಡಿದರು.
ಆದರೆ, ಡಿ.ಕೆ.ಶಿವಕುಮಾರ್ ಪರ ವಕೀಲರು, ಏಕಸದಸ್ಯ ಪೀಠ ಸಂವಿಧಾನ 226, 227ನೇ ಕಲಂ ಅಡಿ ತೀಪು ನೀಡಿರುವುದರಿಂದ ಮೇಲ್ಮನವಿ ಸಲ್ಲಿಸಬಹುದಾಗಿದೆ ಎಂದು ಸಮರ್ಥನೆ ನೀಡಿದರು.
ಡಿ.ಕೆ. ಶಿವಕುಮಾರ್ ಮತ್ತವರ ಆಪ್ತರು ಜಾರಿ ನಿರ್ದೇಶನಾಲಯದ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ ಏಕಸದಸ್ಯ ಪೀಠ ಆ.28ರಂದು ವಜಾಗೊಳಿಸಿತ್ತು. ಅದರ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಇಡಿ ಪುನಃ ಸಮನ್ಸ್ ನೀಡಿತ್ತು. ವಿಚಾರಣೆಗೆ ಹಾಜರಾದರೆ ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಬೇಕೆಂದು ಕೋರಿ ಡಿ.ಕೆ.ಶಿವಕುಮಾರ್ ಆ.30ರಂದು ಅಜರ್ಿ ಸಲ್ಲಿಸಿದ್ದರು. ಅದನ್ನು ನ್ಯಾಯಪೀಠ ತಳ್ಳಿ ಹಾಕಿತ್ತು.
ಇದರಿಂದ ಅನಿವಾರ್ಯವಾಗಿ ಡಿ.ಕೆ.ಶಿವಕುಮಾರ್ ವಿಚಾರಣೆಗೆ ಹಾಜರಾಗಿದ್ದರು. ನಾಲ್ಕು ದಿನಗಳ ಕಾಲ ವಿಚಾರಣೆ ನಡೆಸಿದ ಇ.ಡಿ. ಅಧಿಕಾರಿಗಳು ನಂತರ ಅವರನ್ನು ಬಂಧಿಸಿದ್ದರು. ನ್ಯಾಯಾಲಯ ಈಗ ಅವರನ್ನು ಇಡಿ ವಶಕ್ಕೆ ನೀಡಿದೆ.