ನರೇಗಾ ಕಾಮಗಾರಿ ಸ್ಥಳಕ್ಕೆ ಇಒ ಚೆಲುವಯ್ಯ ಭೇಟಿ, ಪರೀಶೀಲನೆ
EO Cheluvayya visited Narega work site and inspected
ದೇವರ ಹಿಪ್ಪರಗಿ 17 : ತಾಲೂಕಿನ ಸಾತಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರವಾಡಗಿ ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಡೆಯುತ್ತಿರುವ ಗ್ರಾಮದ ಅಮೀನಸಾಬ ನಬಿಸಾಬ ಡೋಣೂರ ಜಮೀನಿಗೆ ದೊಡ್ಡ ದರ್ಗಾದಿಂದ ಸರ್ಕಾರಿ ನಾಲಾ ಹೂಳು ತೆಗೆಯುವ ಕಾಮಗಾರಿ” ಸ್ಥಳಕ್ಕೆ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ ರವರು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರೀಶೀಲಿಸಿದರು.
ಕಾಮಗಾರಿ ಸಂದರ್ಭದಲ್ಲಿ ಗಂಡು-29 ಹಾಗೂ ಹೆಣ್ಣು-21 ಸೇರಿ ಒಟ್ಟು-50 ಕೂಲಿಕಾರರು ಹಾಜರಿದ್ದರು,ಕೂಲಿಕಾರರೊಂದಿಗೆ ಸಂವಾದ ನಡೆಸಿ, ಮನರೇಗಾ ಯೋಜನೆಯ ಉದ್ದೇಶ, ಕೂಲಿಕಾರರ ಹಕ್ಕುಗಳು, ಸರ್ಕಾರದಿಂದ ದೊರೆಯುವ ಸೌಲಭ್ಯಗಳು ಹಾಗೂ ಕೆಲಸದ ಸ್ಥಳದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ಮಾಹಿತಿ ನೀಡಿದರು. ಜೊತೆಗೆ ಎನ್ಎಂಎಂಎಸ್ ಪೀಸ್ ಅಥೆಂಟಿಕೇಶನ್ ಪರೀಶೀಲಿಸಿ, ಹಾಜರಾತಿ ದಾಖಲಾತಿಗಳನ್ನು ವೀಕ್ಷಿಸಿದರು.ನಂತರ ಕೂಲಿಕಾರರಿಗೆ ಅಗತ್ಯವಾದ ಕುಡಿಯುವ ನೀರು, ನೆರಳು ಹಾಗೂ ಮೂಲಭೂತ ಸೌಲಭ್ಯಗಳನ್ನು ಸಮರ್ಕವಾಗಿ ಒದಗಿಸುವಂತೆ ಪಿಡಿಓ ರವರಿಗೆ ಸೂಚನೆ ನೀಡಿದರು. ಕಾಮಗಾರಿ ಗುಣಮಟ್ಟ ಕಾಪಾಡುವ ಜೊತೆಗೆ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಮಾರ್ಗದರ್ಶನ ನೀಡಿದರು.ನರೇಗಾ ಸಹಾಯಕ ನಿರ್ದೇಶಕರಾದ(ಗ್ರಾ.ಉ) ಶಾಂತಗೌಡ ನ್ಯಾಮಣ್ಣವರ ಅವರು ಮಾತನಾಡಿ, “ತಮಗೆ ನೀಡಿರುವ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಿ, ಗ್ರಾಮದಲ್ಲಿನ ಇತರ ಕೂಲಿಕಾರರು ಹಾಗೂ ತಮ್ಮ ಸಂಬಂಧಿಕರಿಗೂ ಮನರೇಗಾ ಯೋಜನೆಯಡಿ ಉದ್ಯೋಗಾವಕಾಶ ದೊರೆಯುವ ಕುರಿತು ಜಾಗೃತಿ ಮೂಡಿಸಿ” ಎಂದು ತಿಳಿಸಿದರು.
ಮನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಯಾಗುವುದರ ಜೊತೆಗೆ ನೀರಿನ ಸಂರಕ್ಷಣೆ, ಭೂ ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆಗೆ ಸಹಕಾರಿಯಾಗುವ ಕಾಮಗಾರಿಗಳು ಪರಿಣಾಮಕಾರಿಯಾಗಿ ನಡೆಯುತ್ತಿವೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟರು.ಇದೇ ಸಂದರ್ಭದಲ್ಲಿ ಪಿಡಿಓ ಎಂ.ಎನ್. ಕತ್ತಿ, ಐಇಸಿ ಸಂಯೋಜಕ ಸಿದ್ದು ಕಾಂಬಳೆ, ತಾಂಡ ರೋಜ್ಗಾರ್ ಮಿತ್ರ ವಿನೋದ ಚವ್ಹಾನ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಕಾರ್ಮಿಕರು ಹಾಜರಿದ್ದರು.
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ 