ಯೋಜನೆ ಕುರಿತ ಜಾಗೃತಿ ಅಭಿಯಾನಕ್ಕೆ ಇಒ ಶ್ರೀಧರ್ ಬಾರಕೆರ್ ಚಾಲನೆ
EO Shridhar Baraker launched awareness campaign about the scheme
ಲೋಕದರ್ಶನ ವರದಿ
ಬಳ್ಳಾರಿ 15: ಗ್ರಾಮೀಣ ಭಾಗದ ಜನರ ಆರ್ಥಿಕ ಸಬಲೀಕರಣ ಹಾಗೂ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಜಾರಿಗೆ ತರಲಾಗಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯ ಕುರಿತು ಶ್ರೀಧರಗಡ್ಡ ಮತ್ತು ಕೊರ್ಲಗುಂದಿ ಗ್ರಾಮ ಪಂಚಾಯತಿಗಳಲ್ಲಿ ಬುಧವಾರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು. ಬಳ್ಳಾರಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಬಾರಕೆರ್ ಅವರು, ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಯಡಿ ಹಮ್ಮಿಕೊಂಡಿದ್ದ ಈ ಜಾಗೃತಿ ಅಭಿಯಾನಕ್ಕೆ ಸ್ವಚ್ಛ ಭಾರತ ಮಿಷನ್ ವಾಹನದ ಮುಖಾಂತರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ವಿ-ಬಿಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಕೂಲಿಕಾರರಿಗೆ ಆರ್ಥಿಕ ಭದ್ರತೆ ನೀಡಲು ಹಲವು ಸುಧಾರಣೆಗಳನ್ನು ತರಲಾಗಿದ್ದು, ಈ ಯೋಜನೆಯಡಿ ಕೂಲಿ ದರವನ್ನು ರೂ.370 ರಿಂದ 382 ರೂ. ವರೆಗೆ ಹೆಚ್ಚಿಸಲಾಗಿದೆ. ಅಷ್ಟೇ ಅಲ್ಲದೆ, ಒಂದು ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ನೀಡಲಾಗುತ್ತಿದ್ದ ಉದ್ಯೋಗದ ಅವಧಿಯನ್ನು 125 ಮಾನವ ದಿನಗಳಿಗೆ ಹೆಚ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಈ ಯೋಜನೆಯಿಂದ ನೀರು ಸಂಗ್ರಹಣೆ ಮತ್ತು ಜಲ ಮೂಲಗಳ ಪುನಶ್ಚೇತನಕ್ಕೆ ಸಂಬಂಧಿಸಿದ ಕಾಮಗಾರಿಗಳಿಗೆ ವಿಶೇಷ ಉತ್ತೇಜನ ನೀಡುವುದು. ಗ್ರಾಮೀಣ ಜನರ ಜೀವನೋಪಾಯದ ಅವಕಾಶಗಳನ್ನು ಹೆಚ್ಚು ಮಾಡುವುದು. ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. ಈ ಯೋಜನೆಯಡಿ ಕೂಲಿಕಾರರಿಗೆ ನಿರಂತರ ಕೆಲಸ ನೀಡುವುದು ಮತ್ತು ರೈತರಿಗೆ ಅನುಕೂಲವಾಗುವಂತೆ ಮಾಡಲು ಸರ್ಕಾರವು ಒಟ್ಟು 318 ವೈವಿಧ್ಯಮಯ ಕಾಮಗಾರಿಗಳನ್ನು ನಿಗದಿಪಡಿಸಿದೆ. ರೈತರು ಹಾಗೂ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಈ ಯೋಜನೆಯಲ್ಲಿ ಸುವರ್ಣಾವಕಾಶಗಳಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸ್ವಸಹಾಯ ಸಂಘದ ಸದಸ್ಯರು, ಮೇಟಿಗಳು ಹಾಗೂ ಕೂಲಿಕಾರರಿಗೆ ಯೋಜನೆಯ ಸಂಪೂರ್ಣ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಆರ್.ಕೆ ಬಸವರಾಜ್, ಶ್ರೀಧರಗಡ್ಡ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ, ಕೊರ್ಲಗುಂದಿ ಗ್ರಾ.ಪಂ. ಪಿಡಿಓ ಪ್ರಕಾಶ ಅಮರಶೆಟ್ಟಿ, ತಾಲೂಕು ಐಇಸಿ ಸಂಯೋಜಕ ರಮೇಶ ಸೇರಿದಂತೆ ಪ್ರಮುಖರಾದ ವಿಜಯಮಹಂತೇಶ, ಎಸ್ಡಿಎ, ಡಿಇಓಗಳು, ಪಂಚಾಯತಿ ಕಾರ್ಯದರ್ಶಿಗಳು, ಕರವಸೂಲಿಗಾರರು, ಬಿಎಫ್ಟಿ, ಜಿಕೆಎಂ, ಸ್ವಸಹಾಯ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು 