ಕೊಪ್ಪಳ 26: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿಯಿಂದ ಅಂಗನವಾಡಿ, ಆಶಾ ಕಾರ್ಯಕತರ್ೆಯರಿಗೆ ಮತದಾನ ಜಾಗೃತಿ ಮತ್ತು ಇ.ವಿ.ಎಂ. ಹಾಗೂ ವಿ.ವಿ.ಪ್ಯಾಟ್ ಯಂತ್ರಗಳ ಕುರಿತು ಮಾಹಿತಿಯನ್ನು ನೀಡಲಾಯಿತು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಸಕ್ಷಮ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಅಂಗನವಾಡಿ, ಆಶಾ ಕಾರ್ಯಕತರ್ೆಯರಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರದಂದು ಆಯೋಜಿಸಲಾದ ಕಾರ್ಯಗಾರದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಮೂಡಿಸಲಾಯಿತು.
ಜಿಲ್ಲಾ ಸ್ವೀಪ್ ಸಮಿತಿಯ ಶ್ರೀನಿವಾಸ್ ಚಿತ್ರಗಾರ ಅವರು ಮತದಾನ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಮತ ಖಾತ್ರಿಗಾಗಿ ಬಳಕೆ ಮಾಡಲಾದ ಮತದಾನ ಖಾತ್ರಿಯಂತ್ರ ವಿ.ವಿ.ಪ್ಯಾಟ್ ಕಾರ್ಯ ನಿರ್ವಹಣೆ ಕುರಿತು ಮಸ್ಟರ್ ಟ್ರೈನರ್ ಪ್ರವೀಣ ಹಾಗೂ ಗಿರೀಶ್ ಮಾಹಿತಿಯನ್ನು ನೀಡಿದರು. ಅಂಗನವಾಡಿ, ಆಶಾ ಕಾರ್ಯಕತರ್ೆಯರು ಇದೇ ಸಂದರ್ಭದಲ್ಲಿ ಪ್ರಾಯೋಗಿಕವಾಗಿ ಮತದಾನ ಮಾಡಿ, ತಾವು ಹಾಕಿರುವ ಮತವನ್ನು ವಿ.ವಿ.ಪ್ಯಾಟ್ ಮೂಲಕ ಖಾತ್ರಿ ಪಡಿಸಿಕೊಂಡರು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ವರಿವೀಕ್ಷಕ ಪತ್ತಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಜಂಬಯ್ಯ ಬಿ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲೆಯ ವಿವಿಧ ತಾಲೂಕುಗಳ ಆಶಾ ಹಾಗೂ ಅಂಗನವಾಡಿ ಕಾರ್ಯಕತರ್ೆಯರು, ಆರೋಗ್ಯ ಸಹಾಯಕೀಯರು ಮತ್ತಿತರರು ಉಪಸ್ಥಿತರಿದ್ದರು.