ಪ್ರತಿ ಇಲಾಖೆಗಳು ನಿಗದಿತ ಗುರಿ ಸಾಧಿಸಿ: ದೇಶಪಾಂಡೆ

ಧಾರವಾಡ.03: ಸಕರ್ಾರವು ಜನರ ಕಲ್ಯಾಣ ಹಾಗೂ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಮಾಡಿದೆ. ಅವುಗಳ್ನು ಪ್ರತಿ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ತಿಂಗಳಿಗೊಮ್ಮೆಯಾದರೂ ಪ್ರಗತಿ ಪರಿಶೀಲನೆ ಮಾಡುವ ಮೂಲಕ ಇಲಾಖೆಗೆ ನಿಗದಿಪಡಿಸಿದ ಗುರಿಯನ್ನು ಸಾಧಿಸಬೇಕೆಂದು ಕಂದಾಯ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವ್ಹಿ. ದೇಶಪಾಂಡೆ ಹೇಳಿದರು.

 ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜನಸಂಪರ್ಕ ಸಭೆಗೆ ಮುನ್ನ ಅಧಿಕಾರಿಗಳನ್ನು ಉದ್ದೇಶಿಸಿ, ಮಾತನಾಡಿದರು.

ಕಳೆದ ಮೂರು ತಿಂಗಳಿನಿಂದ ಚುನಾವಣಾ ನೀತಿ ಸಂಹಿತೆಯಿಂದಾಗಿ ಇಲಾಖೆ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ  ಪರಿಶೀಲನೆ ಮಾಡಲು ಸಾಧ್ಯವಾಗಲಿಲ್ಲ. ಆಯಾ ಇಲಾಖೆಗಳ ಜಿಲ್ಲಾ ಮುಖ್ಯಸ್ಥರು ಸ್ವಯಂ ಪ್ರೇರಣೆಯಿಂದ ಮುಂದಾಳತ್ವ ವಹಿಸಿ ತಮ್ಮ ಇಲಾಖೆಗೆ ನಿಗದಿಪಡಿಸಿದ ಗುರಿಯನ್ನು ಸಾಧಿಸಬೇಕು. 

ಯಾವುದೇ ಹಂತದ ಅಧಿಕಾರಿ ಸಕಾರಣವಿಲ್ಲದೇ ಯಾವುದೇ  ಕಡತಗಳನ್ನು ಬಾಕಿ ಉಳಿಸಬಾರದು.  ಇದರಿಂದಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತದೆ. ನ್ಯಾಯಯುತ ಕಾರಣವಿಲ್ಲದೆ ಕಡತಗಳನ್ನು ಬಾಕಿ ಉಳಿಸಿಕೊಂಡಿದ್ದು ಸಕರ್ಾರದ ಗಮನಕ್ಕೆ ಬಂದರೆ ಅದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಜರುಗಿಸಲಾಗುವುದೆಂದು ಅವರು ಎಚ್ಚರಿಕೆ ನೀಡಿದರು.

ಬಡವರು, ರೈತರು, ದಲಿತರು, ಅಸಾಹಾಯಕ ಜನರ ಬಗ್ಗೆ ಅಧಿಕಾರಿಗಳು ಕಳಕಳಿಯಿಂದ ಕೆಲಸ ಮಾಡಬೇಕು. ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗಿ ಕಾನೂನು ಬಾಹಿರವಾಗಿ ಕೆಲಸ ಮಾಡಬಾರದು.  

 ನಿಯಮಾನಸಾರ ಕೆಲಸ ಮಾಡಿ, ಜನರ ಹಿತದೃಷ್ಟಿಯಿಂದ ಸಮಾಜಕ್ಕೆ ಒಳ್ಳೆಯದಾಗುವ ನಿಧರ್ಾರಗಳನ್ನು ಸ್ವತಂತ್ರವಾಗಿ ತೆಗೆದುಕೊಂಡು ಕಾನೂನಾತ್ಮಕವಾಗಿ ಕರ್ತವ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸಚಿವರು ತಿಳಿಸಿದರು. 

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆಯಾಗದಂತೆ ಜಿಲ್ಲಾಡಳಿತ ಸೂಕ್ತ ಕ್ರಮ ತೆಗೆದುಕೊಂಡಿದೆ. ನಗರ ಮತ್ತು ಗ್ರಾಮೀಣ ಪ್ರದೇಶಕ್ಕೆ ಕುಡಿಯುವ ನೀರು ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಸಚಿವರು ಸೂಚಿಸಿದರು.

  ಹುಬ್ಬಳ್ಳಿ-ಧಾರವಾಡ ಮಹಾನಗರಕ್ಕೆ ಮಲಪ್ರಭಾ ಹಾಗೂ ನೀರಸಾಗರ ಜಲಾಶಯದಿಂದ ನೀರು ಬರುತ್ತಿತ್ತು. ಆದರೆ ನೀರಸಾಗರ ಜಲಾಶಯ ಬತ್ತಿರುವುದರಿಂದ ಕಳೆದ ಎರಡು ಮೂರು ವರ್ಷದಿಂದ ನೀರು ಸರಬರಾಜು ಸಾಧ್ಯವಾಗಿಲ್ಲ. ಪಾಲಿಕೆ ಅಧಿಕಾರಿಗಳು ನೀರಸಾಗರ ಜಲಾಶಯ ಸಮೀಕ್ಷೆ ಮಾಡಿ, ಜಲಾನಯನ ಪ್ರದೇಶದ ಜಮೀನು ಒತ್ತುವರಿಯಾಗಿದ್ದಲ್ಲಿ ತೆರವುಗೊಳಿಸಲು ತಕ್ಷಣ ಕ್ರಮಕೈಗೊಳ್ಳಬೇಕು ಮತ್ತು ಜಲಾಶಯಕ್ಕೆ ಮಳೆನೀರು ಸರಾಗವಾಗಿ ಬಂದು ಸೇರುವಂತೆ ಅಭಿವೃದ್ಧಿಪಡಿಸಬೇಕು ಎಂದು ಸಚಿವರು ತಿಳಿಸಿದರು.

ಬರುವ ಜೂನ್ 14 ರಂದು ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲನೆಗಾಗಿ ತ್ರೈಮಾಸಿಕ ಕೆಡಿಪಿ ಸಭೆ ಮಾಡಲಾಗುತ್ತದೆ. ಅಧಿಕಾರಿಗಳು ಇಲ್ಲಿವರೆಗೆ ಆಗಬೇಕಿದ್ದ ಪ್ರಗತಿಯನ್ನು ನೀಡಬೇಕು. ಯಾವುದೇ ಸಬೂಬುಗಳಿಗೆ ಅವಕಾಶವಿಲ್ಲ. ಬಾಕಿ ಇರುವ ಕಾರ್ಯಗಳ ತ್ವರಿತ ಅನುಷ್ಠಾನದ ಕುರಿತು ಕಾರ್ಯಪ್ರವೃತ್ತರಾಗಿ ಎಂದು ತಿಳಿಸಿದರು.

ಶಾಸಕರಾದ ಪ್ರಸಾದ ಅಬ್ಬಯ್ಯ, ಅಮೃತ ದೇಸಾಯಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ, ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಬಿ.ಸಿ. ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಜಿ., ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಪ್ರಶಾಂತಕುಮಾರ್ ಮಿಶ್ರಾ, ಅಪರ ಜಿಲ್ಲಾಧಿಕಾರಿ ಡಾ: ಸುರೇಶ್ ಇಟ್ನಾಳ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.