ನವದೆಹಲಿ, ಜೂನ್ 19, ಈಶಾನ್ಯ ಭಾರತದ ರಾಜ್ಯಗಳಲ್ಲಿ ಗುರುವಾರ ರಾತ್ರಿ ಮಧ್ಯಮ ಪ್ರಮಾಣದ ಭೂಕಂಪ ಸಂಭವಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಗುರುವಾರ ರಾತ್ರಿ 7.30 ರ ಸುಮಾರಿಗೆ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 5 ರಷ್ಟು ದಾಖಲಾಗಿತ್ತು ಎಂದು ವರದಿಯಾಗಿದೆ.ಮಿಜೋರಾಂನ ಚಂಪೈ ಜಿಲ್ಲೆಯಲ್ಲಿ ಕಂಪನದ ಕೇಂದ್ರ ಬಿಂದು ಇತ್ತು ಎಂದು ತಿಳಿದುಬಂದಿದೆ. ಶಿಲ್ಲಾಂಗ್ ಸೇರಿದಂತೆ ಈಶಾನ್ಯ ಭಾರತದ ಪ್ರಮುಖ ನಗರಗಳಲ್ಲಿ ಕಂಪನದ ಅನುಭವವಾಗಿದೆ. ಮೇಘಾಲಯದಲ್ಲಿ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.