ಪೀಳಿಗೆಯ ಭವಿಷ್ಯಕ್ಕಾಗಿ ಪರಿಸರ ಸ್ನೇಹಿ ಜೀವನ ಶೈಲಿ ಅತ್ಯಗತ್ಯ: ಜಾಬಶೆಟ್ಟಿ
Eco-friendly lifestyle is essential for future generations: Jobashetti
ಧಾರವಾಡ 07: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡ ಹಾಗೂ ಸರಕಾರಿ ಪ್ರೌಢ ಶಾಲೆ, ವೀರಾಪೂರ ಇವರ ಆಶ್ರಯದಲ್ಲಿ ನಡೆದ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಪರಿಸರ ಸ್ನೇಹಿ ಜೈವಿಕ ತಂತ್ರಜ್ಞಾನ ಮತ್ತು ಸೌರ ವಿದ್ಯುತ್ ಶಕ್ತಿ ಉತ್ಪಾದನೆ ತಂತ್ರಜ್ಞಾನಗಳು ಕುರಿತು ಸರಕಾರಿ ಪ್ರೌಢಶಾಲೆ ವೀರಾಪುರದ ಸಹ್ಯಾದ್ರಿ ಪರಿಸರ ಸಂಘದ ಆಶ್ರಯದಲ್ಲಿ ಆಯೋಜಿಸಿದ ಉಪನ್ಯಾಸ ಕಾರ್ಯಕ್ರಮವನ್ನು ಮುಖ್ಯಾಧ್ಯಾಪಕಿ ಮಂಗಳಗೌರಿ ಬಡಿಗೇರ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
ತ್ಯಾಜ್ಯ ನಿರ್ವಹಣೆಯಲ್ಲಿ ಸಮುದಾಯದ ಸಹಭಾಗಿತ್ವ ಅವಶ್ಯಕವಾಗಿದೆ. ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಪರಿಸರ ಸ್ನೇಹಿ ಜೀವನ ಶೈಲಿ, ವಿಷಮುಕ್ತ ಆಹಾರ ಉತ್ಪಾದನೆ, ಶುದ್ಧ ನೀರು, ಶುದ್ಧ ಗಾಳಿ ದೊರೆಯುವಂತೆ ಇಂದಿನ ಮಕ್ಕಳು ಭಾಷ್ಯ ಬರೆಯಬೇಕಾಗಿದೆ, ಪಾರಂಪರಿಕ ಹಾಗೂ ನಂದಿ ಆಧಾರಿತ ಕೃಷಿಯ ಪುನರುತ್ಥಾನಕ್ಕಾಗಿ ನಾವೆಲ್ಲರೂ ಕಂಕಣ ಬದ್ಧರಾಗಬೇಕಿದೆಯೆಂದು ಖ್ಯಾತ ಪರಿಸರವಾದಿ ಭಾಲಚಂದ್ರ ಜಾಬಶೆಟ್ಟಿಯವರು ನೀಡಿದ ಉಪನ್ಯಾಸದ ಮುಖ್ಯಾಂಶಗಳಲ್ಲೊಂದಾಗಿತ್ತು. ಸೌರ ವಿದ್ಯುಚ್ಛಕ್ತಿ ಉತ್ಪಾದನೆಯಿಂದ ದೊರೆಯುವ ಲಾಭಗಳ ಕುರಿತು ವಿವಿಧ ಆಯಾಮಗಳಲ್ಲಿ ವಿಷಯ ಮಂಡಿಸಿದರು.
ಎಸ್.ಡಿ.ಎಮ್.ಸಿ ಅಧ್ಯಕ್ಷ ಈರನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು, ಧಾರವಾಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹಾಂತೇಶ ನರೇಗಲ್ಲ ಸರ್ ರವರು ಅತಿಥಿಗಳನ್ನು ಪರಿಚಯಿಸಿದರು, ವಿಜ್ಞಾನ ಶಿಕ್ಷಕಿ ಸ್ಮಿತಾ ವಡಗಾವೆ ಕಾರ್ಯಕ್ರಮ ನಿರೂಪಿಸಿದರು, ಡಾ.ಕೆ ಪರಿಮಳಾ ಸ್ವಾಗತಿಸಿದರು. ಉಮಾದೇವಿ ಪಾಟೀಲ ವಂದಿಸಿದರು.ಸುರೇಶ ಮುಗಳಿ, ಸುವರ್ಣ ಪಾಟೀಲ, ವಾಯ್ ಎಸ್ ಬೆಣ್ಣಿ ಹಾಗೂ ಗುರುಬಳಗ ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 