ಮೀನು ಸಾಕಾಣಿಕೆಯಿಂದ ಆರ್ಥಿಕ ಅಭಿವೃದ್ಧಿ: ಜಿಪಂ ಉಪಕಾರ್ಯದರ್ಶಿ ಗಿರಿಜಾ ಶಂಕರ್
Economic development through fish farming: ZP Deputy Secretary Girija Shankar
ಬಳ್ಳಾರಿ 27: ಮಹಿಳೆಯರು ಬಿಡುವಿನ ಸಮಯದಲ್ಲಿ ತಮ್ಮ ಕೃಷಿ ಚಟುವಟಿಕೆ ಜೊತೆಗೆ ಕೃಷಿ ಹೊಂಡದಲ್ಲಿ ಮೀನು ಸಾಕಾಣಿಕೆ ಮಾಡುವುದರಿಂದ ತಮ್ಮ ಕುಟುಂಬ ಆರ್ಥಿಕ ಅಭಿವೃದ್ಧಿಯಾಗುವುದು ಎಂದು ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಗಿರಿಜಾ ಶಂಕರ ಅವರು ಹೇಳಿದರು.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಶುಕ್ರವಾರ ಏರಿ್ಡಸಿದ್ದ ಸ್ವ ಸಹಾಯ ಸಂಘದ ಮಹಿಳೆಯರಿಗೆ 10 ದಿನಗಳ ಉಚಿತ ಮೀನು ಸಾಕಾಣಿಕೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಿನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಿವಣ್ಣ ಅವರು ಮಾತನಾಡಿ, ಮೀನು ಆರೋಗ್ಯಕ್ಕೆ ಉತ್ತಮ ಆಹಾರವಾಗಿದ್ದು, ಪ್ರತಿಯೊಂದು ದೇಹದಲ್ಲಿರುವ ಕೊಲೆಸ್ಟ್ರಾಲ್‌ನ್ನು ಸಮತೋಲನದಲ್ಲಿ ಇಡುತ್ತದೆ. ಇದನ್ನು ಓಷಧಿ ತಯಾರಿಕೆಯಲ್ಲಿ ಉಪಯೋಗಿಸುತ್ತಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ಭೀಮಪ್ಪ.ಕೆ ಲಾಳಿ, ವಿನೋದ ಕುಮಾರ.ಸಿ., ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೆಸಾಬ್.ಎಚ್ ಎರಿಮನಿ, ಜಿಲ್ಲಾ ಪಂಚಾಯತ್‌ನ ಎನ್‌ಆರ್‌ಎಲ್‌ಎಂ ಸಿಬ್ಬಂದಿಗಳಾದ ರಾಜೇಂದ್ರ, ವಿಜಯ ಕುಮಾರ, ರಘುವರ್ಮ, ಉಪನ್ಯಾಸಕರಾದ ದಿನೇಶ್, ಸಿದ್ದಲಿಂಗಮ್ಮ, ಸಂತೋಷ ಕುಮಾರ್ ಸೇರಿದಂತೆ ಮಹಿಳಾ ಶಿಭಿರಾರ್ಥಿಗಳು ಇನ್ನಿತರರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 