ಗೃಹಲಕ್ಷ್ಮಿ ಯೋಜನೆಯಿಂದ ಕುಟುಂಬಗಳ ಆರ್ಥಿಕ ಸಬಲೀಕರಣ: ವೀರಯ್ಯ ಮಠಪತಿ

ಗೃಹಲಕ್ಷ್ಮಿ ಯೋಜನೆಯಿಂದ ಕುಟುಂಬಗಳ ಆರ್ಥಿಕ ಸಬಲೀಕರಣ: ವೀರಯ್ಯ ಮಠಪತಿ  Economic empowerment of families through the Gruha Lakshmi scheme: Veerayya Mathapathi

 ಶಿರಹಟ್ಟಿ, ಜು.21: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ರಾಜ್ಯದ ಮಹಿಳೆಯರು ಹಾಗೂ ಕುಟುಂಬಗಳ ಆರ್ಥಿಕ ಸ್ವಾವಲಂಬನೆಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವೀರಯ್ಯ ಮಠಪತಿ ಹೇಳಿದರು.  ಮಾಗಡಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ಆಯೋಜಿಸಿದ್ದ ಗೃಹಲಕ್ಷ್ಮಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಮೂರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಗೃಹಲಕ್ಷ್ಮಿ ದಿನಾಚರಣೆ ಆಚರಿಸಲಾಗುತ್ತಿದೆ. ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಿ, ಸ್ವಾವಲಂಬಿ ಜೀವನ ನಡೆಸುವಂತಾಗಿದ್ದು, ಇನ್ನಷ್ಟು ಮಹಿಳೆಯರು ಉದ್ಯಮ ಆರಂಭಿಸಿ ಇತರರಿಗೂ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯಬೇಕು ಎಂದು ಆಶಿಸಿದರು.  ಈ ಸಂದರ್ಭದಲ್ಲಿ ಖಋ ಪ್ರಕ್ರಿಯೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಃಐಓಗಳಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.  

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀ ದ್ಯಾಮಣ್ಣ ಸಾಸಳ್ಳಿ, ಶ್ರೀಮತಿ ಶೈನಾಜ್ ಬೇಗಂ ಭುವಾಜಿ, ಶ್ರೀಮತಿ ಲಲಿತವ್ವ ಪಾಟೀಲ, ಕೆಡಿಪಿ ಸದಸ್ಯ ಪವನ್ ಇಳಿಗೇರ, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀ ಮೃತ್ಯುಂಜಯ ಗುಡ್ಡದಾನವರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀ ಎಸ್‌. ವೈ. ಕುಂಬಾರ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಎನ್‌ಆರ್‌ಎಲ್‌ಎಂ ಸಿಬ್ಬಂದಿ ಮತ್ತು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಉಪಸ್ಥಿತರಿದ್ದರು.