ಸಮಾಜದಲ್ಲಿ ಸಮಾನತೆಗೆ ಶಿಕ್ಷಣವೇ ಶಕ್ತಿಯುತ ಸಾಧನ: ರುದ್ರ್ಪ ಲಮಾಣಿ
Education is a powerful tool for equality in society: Rudrappa Lamani
ಬಿ.ಎ.ಜೆ.ಎಸ್.ಎಸ್. ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ
ರಾಣೆಬೆನ್ನೂರು, ಜು.26: ಇಂದಿನ ಸಮಾಜದಲ್ಲಿ ಸಾಮಾಜಿಕ ಸಮಾನತೆ, ಗೌರವ ಹಾಗೂ ವ್ಯಕ್ತಿತ್ವ ವಿಕಾಸಕ್ಕೆ ಶಿಕ್ಷಣವೇ ಅತ್ಯಂತ ಪ್ರಮುಖ ಸಾಧನವಾಗಿದೆ ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಹಾಗೂ ಬಿ.ಎ.ಜೆ.ಎಸ್.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರುದ್ರ್ಪ ಎಂ. ಲಮಾಣಿ ಹೇಳಿದರು.
ನಗರದ ಬಿ.ಎ.ಜೆ.ಎಸ್.ಎಸ್. ಕಾಲೇಜಿನ ಐ.ಜಿ. ಸನದಿ ಸಭಾಭವನದಲ್ಲಿ 2026ಹಿ27್ಫೂ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಿಕ್ಷಣ ಸಂಸ್ಥೆಯು ಜಾತಿ, ಮತ, ಭೇದಭಾವ ಮೀರಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗಾಗಿ ಆಧುನಿಕ ಶಿಕ್ಷಣ ವ್ಯವಸ್ಥೆಗೆ ಅನುಗುಣವಾಗಿ ಹೊಸ ಯೋಜನೆಗಳನ್ನು ರೂಪಿಸಲಾಗಿದ್ದು, ಶೀಘ್ರದಲ್ಲೇ ನೂತನ ಕಟ್ಟಡ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು.
ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು
ಮುಖ್ಯ ಅತಿಥಿಯಾಗಿದ್ದ ಸಂಸ್ಥೆಯ ಆಡಳಿತಾಧಿಕಾರಿ ಡಾ. ಆರ್.ಎಂ. ಕುಬೇರ್ಪ ಮಾತನಾಡಿ, ಧರ್ಮ, ಸಂಸ್ಕೃತಿ ಹಾಗೂ ಮೌಲ್ಯಾಧಾರಿತ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಏಕಾಗ್ರತೆ ಮತ್ತು ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದರು. ಇಂದಿನ ಮಹಿಳೆಯರು ತಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿಕೊಂಡು ಆಧುನಿಕ ಸಮಾಜದಲ್ಲಿ ಮುನ್ನಡೆಯಬೇಕಾದ ಅಗತ್ಯವಿದೆ ಎಂದು ಹೇಳಿದರು.
ಕನ್ನಡದೊಂದಿಗೆ ಇಂಗ್ಲಿಷ್ ಜ್ಞಾನವೂ ಅಗತ್ಯ
ಶೈಕ್ಷಣಿಕ ಸಲಹೆಗಾರ ಪ್ರೊ. ಭೀಕ್ಷಾವರ್ತಿಮಠ ಮಾತನಾಡಿ, ಕನ್ನಡ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದುವುದರೊಂದಿಗೆ ಇಂಗ್ಲಿಷ್ ಭಾಷೆಯ ಜ್ಞಾನವನ್ನೂ ಬೆಳೆಸಿಕೊಳ್ಳುವುದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅನಿವಾರ್ಯವಾಗಿದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಚ್.ಬಿ. ಪಟ್ಟಣಶೆಟ್ಟಿ ಅವರು, ಕಲೆ, ಸಾಹಿತ್ಯ, ಸಂಗೀತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುತ್ತವೆ ಎಂದರು.
ಸಮಾರಂಭದಲ್ಲಿ ಮುಖ್ಯೋಪಾಧ್ಯಾಯ ವಾಗೀಶ ನೀರಲಗಿಮಠ, ವಿಶ್ರಾಂತ ಪ್ರಾಂಶುಪಾಲ ಧೀರೇಂದ್ರ ಏಕಕೋಟೆ, ಶಿಕ್ಷಕರಾದ ನಿಂಗನಗೌಡ ಪಾಟೀಲ, ಕಲಾ ನಿರ್ದೇಶಕ ಕೆ.ಎಸ್. ನಾಗರಾಜ ಸೇರಿದಂತೆ ಹಲವು ಗಣ್ಯರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ವೇದಿಕೆಯಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಪೂಜಾ ಸಂಗಡಿಗರು ಪ್ರಾರ್ಥನೆ ನೆರವೇರಿಸಿದರು. ಕಾವ್ಯ ಸ್ವಾಗತಿಸಿದರು. ಪ್ರೊ. ಮೇಘಾ ಮಾಸೂರ, ಸುನೀತಾ ಲಮಾಣಿ ಕಾರ್ಯಕ್ರಮ ನಿರೂಪಿಸಿದರು. ಕವನಾ ಭಾವಾಪೂರ ವಂದಿಸಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 