ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ: ಮಾಜಿ ಶಾಸಕ ಆನಂದ ನ್ಯಾಮಗೌಡ
Education is important for the development of Vishwakarma society: Former MLA Ananda Nyam Gowda
ಜಮಖಂಡಿ 18: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದಾಗ ಮಾತ್ರ ಸಮಾಜ ಹಾಗೂ ಕುಟುಂಬಗಳು ಅಭಿವೃದ್ಧಿಯತ್ತ ಸಾಗಲು ಸಾಧ್ಯ. ಶಿಕ್ಷಣವೇ ಸಮಾಜದ ಪ್ರಗತಿಗೆ ಪ್ರಮುಖ ಆಧಾರವಾಗಿದ್ದು, ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ನಗರದ ಬಸವ ಭವನದಲ್ಲಿ ತಾಲೂಕ ಆಡಳಿತ ಹಾಗೂ ತಾಲೂಕ ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ರಹ್ಮ ಸೃಷ್ಟಿ ಮಾಡಿದರೆ, ವಿಶ್ವಕರ್ಮರು ಧರ್ಮ ಹಾಗೂ ಸೃಜನಶೀಲತೆಯ ಮೂಲಕ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ವಿಶ್ವಕರ್ಮ ಸಮಾಜ ಹಾಗೂ ಗಾಣಿಗ ಸಮಾಜಕ್ಕೆ ಅವಿನಾಭಾವ ಸಂಬಂಧವಿದೆ ಎಂದರು.
ರಾಜ್ಯದಲ್ಲಿ ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಕರ್ಮ ಜಯಂತ್ಯೋತ್ಸವವನ್ನು ಆಚರಿಸುವ ಮೂಲಕ ಸಮಾಜದ ಗೌರವವನ್ನು ಹೆಚ್ಚಿಸುವ ಕೆಲಸ ಮಾಡಿದ್ದಾರೆ ಎಂದರು.
ಕಡಿಮೆ ಸಂಖ್ಯೆಯಲ್ಲಿದ್ದರೂ ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ಹಲವು ಕೆಲಸಗಳನ್ನು ಮಾಡಲಾಗಿದೆ. ಜಮಖಂಡಿ ತಾಲೂಕಿನಲ್ಲಿ ತಹಶೀಲ್ದಾರ ಅನೀಲ ಬಡಿಗೇರ, ತಾಲೂಕು ಪಂಚಾಯಿತಿ ಇಒ ಮಲ್ಲಿಕಾರ್ಜುನ ಬಡಿಗೇರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಅಧಿಕಾರಿ ಸುರೇಶ ಪಂಚಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ತರಲು ನ್ಯಾಮಗೌಡ ಕುಟುಂಬದಿಂದ ಪ್ರಯತ್ನ ಮಾಡಲಾಗಿದೆ.
ಪಂಚಾಳ ಸಮುದಾಯದವರಿಗೂ ವಿವಿಧ ಕ್ಷೇತ್ರಗಳಲ್ಲಿ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗಿದೆ. ಕೇವಲ ಭಾಷಣ ಮಾಡುವುದಕ್ಕಿಂತ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗಿದೆ. ಕಾಳಿಕಾ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ ರೂ,50 ಲಕ್ಷ ಅನುದಾನ ನೀಡುವ ಕೆಲಸವನ್ನು ಮಾಡುತ್ತೇನೆಎಂದು ಭರವಸೆ ನೀಡಿದರು.
ಪಿಯುಸಿ ಹಾಗೂ ಎಸ್,ಎಸ್,ಎಲ್,ಸಿಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಮತ್ತು ಬಾಬು ಜತ್ತಕರ, ಕು,ಪ್ರೀತಿ ಲೋಹಾರ ಅವರಿಗೆ ಸನ್ಮಾನಿಸಿ ಗೌರವಿಸಿದರು. ಶಹಪೂರ ವಿಶ್ವಕರ್ಮ ಸಮಾಜದ ಕಾಳಹಸ್ತೇಂದ್ರ ಶ್ರೀಗಳು ಆರ್ಶೀವಚನ ನೀಡಿದರು.
ಗುರುನಾಥ ಸುತಾರ ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಅಶೋಕ ಬಡಿಗೇರ, ಚಿದಾನಂದ ಪತ್ತಾರ, ಭಾಸ್ಕರ ಬಡಿಗೇರ, ಡಾ, ವಿದ್ಯಾಧರ ಪತ್ತಾರ, ಸುರೇಶ ಸೋನಾರ, ಸುನೀಲ ಅರ್ಕಸಾಲಿ, ಮಹಾದೇವಿ ಪತ್ತಾರ, ಗೀತಾ ಜತ್ತಕರ, ಬಸವರಾಜ ಬಡಿಗೇರ, ಹಣಮಂತ ಪತ್ತಾರ, ಚಂದ್ರಶೇಕರ ಪತ್ತಾರ, ಆನಂದ ಬಡಿಗೇರ, ಅನೀಲ ಬಡಿಗೇರ, ಮಹೇಶ ಪತ್ತಾರ, ವೀರೇಂದ್ರ ಕೌಲಗಿಕರ, ಕಲ್ಲಪ್ಪ ಬಡಿಗೇರ, ಸಿದ್ರಾಮ ಬಡಿಗೇರ ಸೇರಿದಂತೆ ಅನೇಕರು ಉಪಸ್ಥಿತರಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 