ಶಿಕ್ಷಣ ಜ್ಞಾನ ಸಂಪಾದನೆ ಮಾತ್ರವಲ್ಲ, ಮನಸ್ಸಿನ ಪರಿವರ್ತನೆಗೂ ದಾರಿ: ಸತ್ಯಾತ್ಮ ತೀರ್ಥ ಸ್ವಾಮೀಜಿ
Education is not merely the acquisition of knowledge but also a path to the transformation of the mi
ಲೋಕದರ್ಶನ ವರದಿ
ಧಾರವಾಡ, ಸೆ.23: ಶಿಕ್ಷಣ ಎಂದರೆ ಕೇವಲ ಕಲಿಯುವುದು ಮತ್ತು ಜ್ಞಾನ ಸಂಪಾದಿಸುವುದಷ್ಟೇ ಅಲ್ಲ. ಮನಸ್ಸಿನಲ್ಲಿರುವ ಕೆಟ್ಟ ವಿಚಾರಗಳನ್ನು ತೊಡೆದುಹಾಕಿ, ಮನಸ್ಸನ್ನು ದೋಷಮುಕ್ತಗೊಳಿಸುವುದು ಹಾಗೂ ದುರ್ಗುಣಗಳಿಗೆ ಕಡಿವಾಣ ಹಾಕುವುದೂ ಶಿಕ್ಷಣದ ಉದ್ದೇಶವಾಗಿದೆ ಎಂದು ಪೂಜ್ಯ ಶ್ರೀ ಶ್ರೀ ಶ್ರೀ 1008 ಸತ್ಯಾತ್ಮ ತೀರ್ಥ ಸ್ವಾಮೀಜಿ ಹೇಳಿದರು.
ಧಾರವಾಡದ ವಿದ್ಯಾರಣ್ಯ ಜನತಾ ಶಿಕ್ಷಣ ಸಮಿತಿಗೆ ಭೇಟಿ ನೀಡಿ ಮಾತನಾಡಿದ ಅವರು, ಶಿಕ್ಷಣವು ನಮ್ಮಲ್ಲಿ ಜ್ಞಾನ, ಶಿಸ್ತು, ಆತ್ಮವಿಶ್ವಾಸ, ಸಂಸ್ಕಾರ ಹಾಗೂ ಜವಾಬ್ದಾರಿಯ ಮನೋಭಾವ ಬೆಳೆಸುತ್ತದೆ. ಅಪರಿಗ್ರಹದಂತಹ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಅಂತರಾತ್ಮ ಶುದ್ಧಿಯಾಗುತ್ತದೆ. ಮನಸ್ಸಿನಲ್ಲಿರುವ ದೋಷಗಳು ನಿವಾರಣೆಯಾಗುತ್ತವೆ ಎಂದರು.
ಶಿಕ್ಷಣ ಕೇವಲ ಉದ್ಯೋಗ ಪಡೆಯಲು ಅಥವಾ ಯಶಸ್ವಿಯಾಗಲು ಮಾತ್ರ ಸೀಮಿತವಾಗಬಾರದು. ಕಲಿಯುವ ವಿಷಯ ಮುಗಿದ ಕೂಡಲೇ ಮರೆತುಬಿಡದೆ, ಮನಸ್ಸಿಗೆ ಸಂತೋಷ ನೀಡುವ ಹಾಗೂ ಮೌಲ್ಯಾಧಾರಿತ ಶಿಕ್ಷಣ ಪಡೆಯುವಂತಾಗಬೇಕು.
ಇಂತಹ ಮೌಲ್ಯಾಧಾರಿತ ಶಿಕ್ಷಣವನ್ನು ಪೂಜ್ಯ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹಾಗೂ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ಜೆಎಸ್‌ಎಸ್ ಸಂಸ್ಥೆ ನೀಡುತ್ತಿದೆ. ಈ ಸಂಸ್ಥೆಯಿಂದ ಮಾನವಕುಲದ ಉದ್ಧಾರವಾಗಲಿ ಎಂದು ಆಶೀರ್ವಚನ ನೀಡಿದರು.
ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ್ ಮಾತನಾಡಿ, ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳು ಪೂಜ್ಯರ ಮಾರ್ಗದರ್ಶನ ಮತ್ತು ಆಶೀರ್ವಾದದಿಂದ ನೈತಿಕ ನೆಲೆಗಟ್ಟಿನ ಮೇಲೆ ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿವೆ ಎಂದರು. ಸತ್ಯಾತ್ಮ ತೀರ್ಥ ಸ್ವಾಮೀಜಿಯವರು ಸಂಸ್ಥೆಗೆ ಆಗಮಿಸಿರುವುದು ಸಂತಸ ತಂದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪೂಜ್ಯರಿಗೆ ಶ್ರೀಕೃಷ್ಣ ಪರಮಾತ್ಮನ ಮೂರ್ತಿಯನ್ನು ನೀಡಿ ಗೌರವಿಸಲಾಯಿತು. ಜೆಎಸ್‌ಎಸ್ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಶ್ರೀಕಾಂತ ಕೆಮೂರ್, ಡಾ. ಎಂ.ಎನ್. ತಾವರಗೇರಿ, ಆಡಳಿತಾಧಿಕಾರಿ ಶ್ರೀ ಅರಿಹಂತ ಪ್ರಸಾದ್ ಸೇರಿದಂತೆ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 