ಮೂರು ಶಾಲೆಗಳಲ್ಲಿ ಶೈಕ್ಷಣಿಕ ಸಾಮಾಗ್ರಿ ವಿತರಣೆ ಕಾರ್ಯಕ್ರಮ
Educational material distribution program in three schools
ಬಳ್ಳಾರಿ, ಜುಲೈ 1: ಬಳ್ಳಾರಿ ಸೇವಾ ಸಮಿತಿ ವತಿಯಿಂದ ಬಳ್ಳಾರಿ ನಗರದ ಡಿ.ಸಿ. ಕಾಲೋನಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂದ್ರಾಳ ರಾಮನಗರ ಶಾಲೆ, ವಿಜಯಪುರ ಕ್ಯಾಂಪ್ ಮೂರು ಶಾಲೆಗಳಿಗೆ ಶೈಕ್ಷಣಿಕ ಸಾಮಾಗ್ರಿ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಅವರು ನೆರವೇರಿಸಿದರು. ಕಾರ್ಯಕ್ರಮದ ಅಂಗವಾಗಿ ಶಾಲೆಯ 250 ವಿದ್ಯಾರ್ಥಿಗಳಿಗೆ ಒಂದು ವರ್ಷದ ಅಗತ್ಯವಿರುವ ನೋಟಪುಸ್ತಕ, ಪೆನ್, ಪೆನ್ಸಿಲ್, ರಬ್ಬರ್, ಡ್ರಾಯಿಂಗ್ ಪುಸ್ತಕ, ಕಂಪಾಸ್ ಬಾಕ್ಸ್, ಎರೇಜರ್, ಶಾರ್್ನರ್, ಸ್ಕೆಚ್ ಪೆನ್, ಸ್ಕೇಲ್, ಬಳಪ ಹಾಗೂ ಶಾಲಾ ಬ್ಯಾಗ್ ಸೇರಿದಂತೆ ವಿವಿಧ ಶೈಕ್ಷಣಿಕ ಪ್ರೋತ್ಸಾಹದಾಯಕ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಿಡಿಸಿಸ್ಘಿಐ ಮಾಜಿ ಅಧ್ಯಕ್ಷರಾದ ಡಾ. ರಮೇಶ್ ಗೋಪಾಲ್ ಮಾತನಾಡಿ, ಮಕ್ಕಳಿಗೆ ದೇಶಭಕ್ತ ಭಗತ್ ಸಿಂಗ್ ರವರ ಸಾಹಸ ಕಥೆಗಳನ್ನು ಬೋಧಿಸಿ, ಅವರಂತೆ ಸಾಹಸಿಗಳಾಗುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ಜೆ.ಸಿ. ನಾಗೇಶ, ಬಳ್ಳಾರಿ ಸೇವಾ ಸಮಿತಿ ಅಧ್ಯಕ್ಷರಾದ ಸುರೇಂದ್ರ ಕುಮಾರ್ ಭಪ್ನಾ, ಬಳ್ಳಾರಿ ಸೇವಾ ಸಮಿತಿ ಕಾರ್ಯದರ್ಶಿಗಳಾದ, ವಿ. ರಾಮಚಂದ್ರ, ಕಿರಾಣಿ ಅಂಗಡಿಯ ಅಸೋಸಿಯೇಷನ್ ಅಧ್ಯಕ್ಷರಾದ ವೀರಾಂಜಿನೇಯಲು, ಬಿ.ಎಸ್.ಎಸ್ ಮಾಜಿ ಅಧ್ಯಕ್ಷರಾದ ಸತ್ಯನಾರಾಯಣ, ಶಾಲೆಯ ಮುಖ್ಯ ಗುರುಗಳಾದ, ತಿಪ್ಪೆಸ್ವಾಮಿ ಹಾಗೂ ಎಲ್ಲಾ ಸಹ ಶಿಕ್ಷಕರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 