ಸ್ಪರ್ಧಾತ್ಮಕ ಜಗತ್ತಿನಲ್ಲಿ ಶೈಕ್ಷಣಿಕ ಪ್ರಗತಿ ನಿರ್ಣಾಯಕ: ಶಾಸಕ ಪಠಾಣ
Educational progress is crucial in a competitive world: MLA Pathana
ಸ್ಪರ್ಧಾತ್ಮಕ ಜಗತ್ತಿನಲ್ಲಿ ಶೈಕ್ಷಣಿಕ ಪ್ರಗತಿ ನಿರ್ಣಾಯಕ: ಶಾಸಕ ಪಠಾಣ
ಶಿಗ್ಗಾವಿ 29: ಸ್ಪರ್ಧಾತ್ಮಕ ಜಗತ್ತಿನಲ್ಲಿ ಶೈಕ್ಷಣಿಕ ಪ್ರಗತಿ ನಿರ್ಣಾಯಕ ಪಾತ್ರವಹಿಸಿದೆ ವಿದ್ಯಾವಂತ ವ್ಯಕ್ತಿ ತನ್ನ ಕುಟುಂಬವನ್ನು ಶಿಕ್ಷಣದಿಂದಲೇ ರಕ್ಷಿಸಿಕೊಳ್ಳುತ್ತಾನೆ ಎಂದು ಶಾಸಕ ಯಾಸೀರಖಾನ ಪಠಾಣ ಹೇಳಿದರು. ತಾಲೂಕಿನ ದುಂಡಶಿ ಗ್ರಾಮದ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ನೂತನ ಎರಡು ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರುಶಿಗ್ಗಾವಿಯ ಮಾಜಿ ಶಾಸಕ ದಿ.ನೀಲಕಂಠಗೌಡ್ರ ಪಾಟೀಲ 1986 ನೇ ಇಸವಿಯಲ್ಲಿ ಈ ಶಾಲೆಯನ್ನು ತೆರೆಯುವ ಮೂಲಕ ಅವರ ಅಧಿಕಾರಾವಧಿಯಲ್ಲಿ ದುಂಡಶಿ ಗ್ರಾಮಕ್ಕೆ ಶಾಲೆ ಪ್ರಮುಖ ಹೆಜ್ಜೆ ಗುರುತು ಆಗಿತ್ತು ಅಲ್ಲದೇ ಶಿಕ್ಷಣವು ಜ್ಞಾನ, ಕೌಶಲ್ಯ, ತಂತ್ರ ಇನ್ನಿತರ ಮಾಹಿತ ಜೊತೆಗೆ ಸಮಾಜದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡುವ ಸಾಮರ್ಥ್ಯ ಕಲ್ಪಿಸಲಿದೆ. ಹೀಗಾಗಿ ಪ್ರತಿಯೊಬ್ಬರು ಶಿಕ್ಷಣವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ, ಗ್ಯಾರಂಟಿ ಅಧ್ಯಕ್ಷ ಎಸ್.ಎಫ್. ಮಣಕಟ್ಟಿ, ಗುಡ್ಡಪ್ಪ ಜಲದಿ, ಹನುಮರೆಡ್ಡಿ ನಡುವಿನಮನಿ, ಅಣ್ಣಪ್ಪ ಲಮಾಣಿ, ಆನಂದ ಲಮಾಣಿ ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 