ಲಿಂಗ ಆಯ್ಕೆ ನಿಷೇಧ ಕಾಯ್ದೆ ಪರಿಣಾಮಕಾರಿ ಅನುಷ್ಠಾನಗೊಳಿಸಿ: ಡಿಎಚ್ಒ ಡಾ.ಜನಾರ್ಧನ್
ಬಳ್ಳಾರಿ,ಜು.10: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಪತ್ತೆ ತಂತ್ರ ವಿಧಾನವನ್ನು ಬಳ್ಳಾರಿ ಜಿಲ್ಲೆಯಲ್ಲಿ ಪಿಸಿ ಮತ್ತು ಪಿಎನ್ಡಿಟಿ ಲಿಂಗ ಆಯ್ಕೆ ನಿಷೇಧ ಕಾಯ್ದೆ ಅನ್ವಯ ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಜನಾರ್ಧನ್ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಪಿಸಿ ಮತ್ತು ಪಿ.ಎನ್.ಡಿ.ಟಿ ಲಿಂಗ ಆಯ್ಕೆ ನಿಷೇಧ ಕಾಯ್ದೆಯ ಅನುಷ್ಠಾನದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಯಾವುದೇ ಸ್ಕ್ಯಾನ್ ಸೆಂಟರ್ಗಳಲ್ಲಿ ಸ್ಕ್ಯಾನ್ ಯಂತ್ರದ ಪ್ರತಿಯೊಂದು ಉಪಕರಣಗಳು ಹಾಗೂ ವ್ಯಕ್ತಿಗಳ ದಾಖಲಾತಿಗಳನ್ನು ನೊಂದಣಿಯಾಗಿರಬೇಕು. ಸ್ಕ್ಯಾನ್ಮಾಡಿದವರ ಮಾಹಿತಿಯನ್ನು ತಪ್ಪದೇ ನೊಂದಣಿ ಮಾಡಿಸಿರಬೇಕು, ತಪ್ಪಿದಲ್ಲಿ ಅವರ ವಿರುದ್ಧ ಕ್ರಿಮಿನಲ್ ಕೇಸ್ ನಮೂದಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸ್ಕ್ಯಾನ್ ಸೆಂಟರ್ಗಳಲ್ಲಿ ಭ್ರೂಣಲಿಂಗ ಪತ್ತೆ ಕುರಿತು ದೊಡ್ಡ ಅಕ್ಷರಗಳಲ್ಲಿ ಸಾರ್ವಜನಿಕರಿಗೆ ಕಾಣುವಂತೆ ನಾಮಫಲಕಗಳನ್ನು ಹಾಕಬೇಕು. ಸ್ಕ್ಯಾನ್ ಸೆಂಟರ್ಗಳು ಪ್ರತಿ ಮಾಹೆ 5 ರೊಳಗಾಗಿ ಜಿಲ್ಲಾ ಆಸ್ಪತ್ರೆಗೆ ವರದಿಯನ್ನು ನೀಡಬೇಕು. ಕಾನೂನು ಬಾಹಿರ ಚಟುವಟಿಕೆಗಳು ಕಂಡ ಬಂದಲ್ಲಿ ಅವರ ಮೇಲೆ ಕಾನೂನು ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.
ಈ ಪಿಸಿ ಮತ್ತು ಪಿಎನ್ಡಿಟಿ ಲಿಂಗ ಆಯ್ಕೆಯ ನಿಷೇಧ ಕಾಯ್ದೆ ಅನುಷ್ಠಾನ ಸಮಿತಿಯಲ್ಲಿ ಸಲಹಾ ಸಮಿತಿ ಹಾಗೂ ತಪಾಸಣೆ ಮತ್ತು ಮಾನಿಟರ್ ಸಮಿತಿಯನ್ನು ರಚಿಸಲಾಗಿದೆ. ಯಾವುದೇ ದೂರುಗಳು ಬಂದಲ್ಲಿ ಅವುಗಳನ್ನು ಸಲಹಾ ಸಮಿತಿಯಲ್ಲಿ ಚಚರ್ಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.
ಕುಟುಂಬ ಯೋಜನಾ ಕಾರ್ಯಕ್ರಮಗಳ ಕಲ್ಯಾಣಾಧಿಕಾರಿ ಡಾ.ವಿಜಯಲಕ್ಷ್ಮೀ ಅವರು ಮಾತನಾಡಿ ಲಿಂಗಾನುಪಾತದ ವ್ಯತ್ಯಾಸದ ಮಾಹಿತಿ ಸಭೆಗೆ ನೀಡಿದರು.
ಕಿರಿಯ ಆರೋಗ್ಯ ಸಹಾಯಕರಾದ ಅರುಣ್ ಕುಮಾರ್ ಅವರು ಸ್ವಾಗತಿಸಿ ವಂದಿಸಿದರು.
ಈ ಸಭೆಯಲ್ಲಿ ಹೊಸದಾಗಿ ಸಮಿತಿಯ ಅಧ್ಯಕ್ಷರನ್ನಾಗಿ ರೇಡಿಯಾಲಜಿಸ್ಟ್ ಡಾ.ಎಸ್.ಶಂಭು ಅವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಸಲಹಾ ಸಮಿತಿ ಸದಸ್ಯರು ಹಾಗೂ ಇನ್ನಿತರರು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 