ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಗೊಳಿಸಿ: ಮೂರ್ತಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕೂಲಿ ಕಾಮರ್ಿಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ  ಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಗೊಳಿಸಿ ದುಡಿಮೆ ಬೇಡಿಕೆ ಪಡೆಯುವುದು ಮುಖ್ಯವಾಗಿರುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿವರ್ಾಹಕ ಅಧಿಕಾರಿ ರಘುನಂದನ್ ಮೂರ್ತಿ ಅವರು ಹೇಳಿದರು.

ಕೊಪ್ಪಳ ಜಿಲ್ಲಾ ಪಂಚಯತ್ ವ್ಯಾಪ್ತಿಯ ಗ್ರಾಮೀಣ ಜನರಿಗೆ ಸ್ಥಳೀಯ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶ ದಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಪ್ರಮುಖ ಅಂಶಗಳ ಕುರಿತು ಗ್ರಾಮಸ್ಥರಿಗೆ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಮತ್ತು ಗ್ರಾಮಗಳಲ್ಲಿ ರೋಜಗಾರ್ ವಾಹಿನಿಯು ಸಂಚರಿಸುವ ರೋಜಗಾರ್ ವಾಹಿನಿಗೆ (ವಾಹನಕ್ಕೆ) ಚಾಲನೆ ನೀಡಿ ಅವರು ಮಾತನಾಡಿದರು.  

ಜಿಲ್ಲೆಯ ಕೂಲಿಕಾರರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ  ಮಹಾತ್ಮ ಗಾಂಧಿ ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನಗೊಳಿಸಲು ಕೂಲಿ ಬೇಡಿಕೆ ಪಡೆಯುವುದು ಮುಖ್ಯವಾಗಿದ್ದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು  ಯೋಜನೆಯ ಮಾರ್ಗಸೂಚಿಗಳನ್ವಯ ನಿಯಮಾನುಸಾರ ಗ್ರಾಮ ಪಂಚಾಯತ್ ಮುಖಾಂತರ ಕ್ರಮ ಕೈಗೊಳ್ಳುಬೇಕು.  ಅದರಂತೆ ಉದ್ಯೋಗ ಬೇಡಿಕೆ ಸೃಷ್ಟಿಸಿ ಕೂಲಿ ಕಾಮರ್ಿಕರಿಗೆ ಉದ್ಯೋಗ ನೀಡುವುದು, ಕಾಯಕ ಸಂಘಗಳ ಮೂಲಕ ಕಾಯಕ ಬಂಧುಗಳಿಗೆ ವೈಯಕ್ತಿಕ ಕಾಮಗಾರಿಗಳ ಕುರಿತು ಅರಿವು ಮೂಡಿಸಿ ಕೂಲಿ ಕಾರ್ಮಿಕರೊಂದಿಗೆ ಸಮನ್ವಯ ಸಾಧಿಸಿ ಉದ್ಯೋಗ ಒದಗಿಸಬೇಕು.  ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕನಿಷ್ಟ 50 ವ್ಯಕ್ತಿಗತ ಕಾಮಗಾರಿಗಳನ್ನು ಪ್ರಗತಿಯಲ್ಲಿರುವುದು ಮತ್ತು ಪ್ರತಿ ಗ್ರಾಮದಲ್ಲಿ ಒಂದರಂತೆ ಸಮುದಾಯಧಾರಿತ ಕಾಮಗಾರಿಗಳನ್ನು ಚಾಲನೆಯಲ್ಲಿರುವುದು.  ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ, ಸಣ್ಣ ಅತಿ ಸಣ್ಣ ರೈತರಿಗೆ, ಭೂ ರಹಿತ ಕಾಮರ್ಿಕರಿಗೆ ಬಡತನ ರೇಖೆಗಿಂತ ಕೆಳಮಟ್ಟದವರು ಇನ್ನು ಉಳಿದವರಿಗೂ ಉದ್ಯೋಗ ನೀಡಲು ಕ್ರಮ ಕೈಗೊಳ್ಳಲು ಸೂಚಿಸಿದರು.  

ರೋಜಗಾರ್ ವಾಹಿನಿಯು ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳ ಕುರಿತು ಆಡಿಯೋ ಮತ್ತು ವಿಡಿಯೋ ಮೂಲಕ ಗ್ರಾಮಸ್ಥರಿಗೆ ಅರಿವು ಮೂಡಿಸುತ್ತಿದ್ದು, ಗ್ರಾಮಸ್ಥರು ಇದರ ಸದುಪಯೋಗವನ್ನು ಪಡೆಯಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ  ಜಿ.ಪಂ. ಉಪ ಕಾರ್ಯದಶರ್ಿ ಎನ್.ಕೆ.ತೊರವಿ, ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ ಹಾಗೂ ಕಾಯರ್ಾಲಯದ ಸಿಬ್ಬಂದಿಗಳು ಹಾಗೂ ನರೇಗಾ ಯೋಜನೆಯ ಸಂಯೋಜಕರು ಉಪಸ್ಥಿತರಿದ್ದರು.