ಅಲೆಮಾರಿ ಮಕ್ಕಳಲ್ಲಿ ಜ್ಞಾನ ಬೆಳೆಸುವ ನಿಟ್ಟಿನಲ್ಲಿ ಗ್ರಂಥಾಲಯದ ಸದ್ಬಳಕೆ ಅಗತ್ಯ
Effective use of the library is essential to foster knowledge among children from nomadic communitie
ಹೊಸಪೇಟೆ, ಆ.12: ವಿಜಯನಗರ ಜಿಲ್ಲೆಯ ಹೊಸಪೇಟೆ ನಗರ ವ್ಯಾಪ್ತಿಯ ಅರವಿಂದ ನಗರ ಬುಡ್ಗಜಂಗಮ ಕಾಲೋನಿಯ ಅಲೆಮಾರಿ ಗ್ರಂಥಾಲಯ ಕಚೇರಿಯಲ್ಲಿ ಬುಧವಾರ ಗ್ರಂಥಪಾಲಕರ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪದ್ಮಶ್ರೀ ಡಾ. ಎಸ್.ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಕರ್ನಾಟಕ ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಹಾಗೂ ವಿಮುಕ್ತ ಬುಡಕಟ್ಟುಗಳ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಬುಡ್ಗಜಂಗಮ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಸಣ್ಣ ಮಾರೆಪ್ಪ ಅವರು ಮಾಲಾರೆ್ಣ ಮಾಡಿ, ಹೂವು, ಹಣ್ಣು ಹಾಗೂ ಕಾಯಿ ಸಮರ್ಿಸಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಅಲೆಮಾರಿ ಗ್ರಂಥಾಲಯದ ಮೂಲಕ ಅಲೆಮಾರಿ ಮಕ್ಕಳಲ್ಲಿ ಭಿಕ್ಷಾಟನೆ ಪ್ರವೃತ್ತಿಯನ್ನು ಕಡಿಮೆ ಮಾಡಿ, ಶಿಕ್ಷಣ ಮತ್ತು ಜ್ಞಾನದ ಬೆಳಕು ಮೂಡಿಸುವ ಕಾರ್ಯ ನಡೆಯುತ್ತಿದೆ. ಅನಕ್ಷರಸ್ಥರು ಪುಸ್ತಕಗಳು ಹಾಗೂ ದಿನಪತ್ರಿಕೆಗಳನ್ನು ಓದುವ ಮೂಲಕ ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳ ಅಕ್ಷರಜ್ಞಾನವನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುತ್ತಿದೆ ಎಂದು ಹೇಳಿದರು.
ವಿಶೇಷವಾಗಿ ಬಡ ಕುಟುಂಬಗಳ ಅಲೆಮಾರಿ ಶಾಲಾ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಗ್ರಂಥಾಲಯದ ಸದುಪಯೋಗ ದೊರೆಯುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಜ್ಞಾನಭಂಡಾರ ಹೆಚ್ಚಲು ನೆರವಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಅಲೆಮಾರಿ ಗ್ರಂಥಾಲಯದ ಮೇಲ್ವಿಚಾರಕ ಫಕ್ಕೀರ್ಪ ಬಾದಗಿ, ಕಾಲೋನಿ ಮುಖಂಡರಾದ ದೊಡ್ಡ ಮಾರೆಪ್ಪ, ಡಿ.ಜಂಬಣ್ಣ, ವೈ.ಮಾರೆಪ್ಪ, ಮಂಜಪ್ಪ ಸೇರಿದಂತೆ ಓದುಗರು ಹಾಗೂ ಅಲೆಮಾರಿ ಮಕ್ಕಳು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 