ಆನ್ಲೈನ್ ಪಾಠಗಳ ಮೂಲಕ ನಡೆಸಿರುವ ಪ್ರಯತ್ನ ಯಶಸ್ವಿ: ಸಚಿವ ಡಾ. ಅಶ್ವತ್ಥನಾರಾಯಣ
ವಿಜಯಪುರ೦೩: ಕೋವಿಡ್-19 ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಉದ್ಭವಿಸಿರುವ ಬಿಕ್ಕಟ್ಟನ್ನು ಆನ್ಲೈನ್ ಪಾಠಗಳ ಮೂಲಕ ಪರಿಹರಿಸಿಕೊಳ್ಳಲು ನಡೆಸಿರುವ ಪ್ರಯತ್ನಗಳು ಯಶಸ್ವಿಯಾಗುತ್ತಿವೆ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆನ್ಲೈನ್ ಎಜುಕೇಷನ್ ರೀಸೋಸರ್್ ಸೆಂಟರ್ ಮತ್ತು ಸ್ಪಧರ್ಾತ್ಮಕ ಪರೀಕ್ಷಾ ಕೋಚಿಂಗ್ ಅಕಾಡೆಮಿ ಜಂಟಿಯಾಗಿ ಕೆ-ಸೆಟ್-2020 ಪರೀಕ್ಷೆಗಾಗಿ ಸಿದ್ಧತೆ ಮಾಡುತ್ತಿರುವ ಅಭ್ಯಥರ್ಿಗಳಿಗಾಗಿ ಹಮ್ಮಿಕೊಂಡಿರುವ ಆನ್ಲೈನ್ ತರಬೇತಿ ಕಾರ್ಯಕ್ರಮವನ್ನು ಬುಧವಾರ ಆನ್ಲೈನ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಈ ಆನ್ಲೈನ್ ತರಬೇತಿ ಕಾರ್ಯಕ್ರಮಕ್ಕೆ ಈಗಾಗಲೇ ರಾಜ್ಯದ 30 ಜಿಲ್ಲೆಗಳ ಹತ್ತು ಸಾವಿರಕ್ಕೂ ಹೆಚ್ಚು ಅಭ್ಯಥರ್ಿಗಳು ಹೆಸರು ನೋಂದಾಯಿಸಿಕೊಂಡಿರುವುದು ಅತ್ಯಂತ ಸಂತೋಷದ ಸಂಗತಿ. ಎಲ್ಲರೂ ಈ ಆನ್ಲೈನ್ ಪಾಠಗಳನ್ನು ಸದುಪಯೋಗ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಕೆಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತಾಗಲಿ ಎಂದು ಹಾರೈಸಿದರು.
ಕೋವಿಡ್-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ನಡೆಸುವ ಕೆಸೆಟ್ ಪರೀಕ್ಷೆ ತರಬೇತಿಯನ್ನು ಕೈಬಿಡದೇ ಈ ವರ್ಷವೂ ಕೆಸೆಟ್ ಪರೀಕ್ಷೆಗೆ ಆನ್ಲೈನ್ ಮೂಲಕ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಕಾರ್ಯ.
ಈ ಕಾರಣಕ್ಕೆ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಹಾಗೂ ವಿವಿಯ ಎಲ್ಲಾ ಸಿಬ್ಬಂದಿಗಳನ್ನು ಅಭಿನಂದಿಸುವುದಾಗಿ ಡಾ.ಅಶ್ವತ್ಥನಾರಾಯಣ ತಿಳಿಸಿದರು.
ವರ್ತಮಾನದ ಬಿಕ್ಕಟ್ಟುಗಳನ್ನು ಎದುರುಗೊಳ್ಳುವ ಹಲವು ದಾರಿಗಳಲ್ಲಿ ಆನ್ಲೈನ್ ಕ್ಲಾಸುಗಳು ಮತ್ತು ಆನ್ಲೈನ್ ಸೆಮಿನಾರು ಹಾಗೂ ತರಬೇತಿ ಕಾರ್ಯಾಗಾರಗಳು ಒಂದು ಬಗೆ. ಆನ್ಲೈನ್ ಶಿಕ್ಷಣದ ಪರಿಮಿತಿಗಳು ಏನೇ ಇದ್ದರೂ ಏಕಕಾಲದಲ್ಲಿ ಕನರ್ಾಟಕದ 11,000ಕ್ಕೂ ಅಧಿಕ ಸಂಖ್ಯೆಯ ಅಭ್ಯಥರ್ಿಗಳು ತರಬೇತಿಯ ಪ್ರಯೋಜನಕ್ಕೆ ಭಾಜನರಾಗುವುದು ದೊಡ್ಡ ವಿಷಯ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಹೇಳಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 