ವಿದ್ಯಾರ್ಥಿಗಳಲ್ಲಿ ದೇಶಾಭಿಮಾನ ಬೆಳೆಸುವಲ್ಲಿ ಶ್ರಮಿಸಬೇಕು-ನಾಸಿರ್
Efforts should be made to develop patriotism among students-Nasir
ವಿದ್ಯಾರ್ಥಿಗಳಲ್ಲಿ ದೇಶಾಭಿಮಾನ ಬೆಳೆಸುವಲ್ಲಿ ಶ್ರಮಿಸಬೇಕು-ನಾಸಿರ್
ಕೊಪ್ಪಳ 28: ನಮ್ಮ ದೇಶದ ಸಂವಿಧಾನ ನಮ್ಮೆಲ್ಲರ ಹೆಮ್ಮೆ,ಮಕ್ಕಳಲ್ಲಿ ದೇಶಾಭಿಮಾನ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವಲ್ಲಿ ಶಿಕ್ಷಕರು ಶ್ರಮಿಸಬೇಕು ಎಂದು ಸಮಾಜದ ಯುವ ನಾಯಕ ಲ್ಯಾಂಡ್ ಡೆವಲೂಪರ್ ಸೈಯದ್ ನಾಸಿರ್ ಹುಸೇನ್ ಅಭಿಪ್ರಾಯಪಟ್ಟರು, ಅವರು ನಗರದ ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಮಿಲ್ಲ ತ್ ಪಬ್ಲಿಕ್ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ಸಮಾರಂಭ ದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಡಾ, ಬಿಆರ್ ಅಂಬೇಡ್ಕರ್ ಅವರು ರಚಿಸಿದ ನಮ್ಮ ದೇಶದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಇಲ್ಲಿ ವಾಸಿಸುವ ಸರ್ವರಿಗೂ ಸಮಪಾಲು ಸಮಬಾಳು ಸಾಮಾಜಿಕ ನ್ಯಾಯ ಇದರಲ್ಲಿ ಅಡಗಿದೆ ಎಂದ ಆವರು ಅನೇಕತೆಯಲ್ಲಿ ಏಕತೆ ಸಾರುವ ನಮ್ಮ ದೇಶದ ಸಂಸ್ಕೃತಿ ಪರಂಪರೆ ರಾಷ್ಟ್ರ ನಾಯಕರ ಜೀವನ ಚರಿತ್ರೆ ವಿದ್ಯಾರ್ಥಿ ಯುವಕರಿಗೆ ತಿಳಿಸಿ ಅವರಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವಂತಹ ಕೆಲಸ ಶಿಕ್ಷಕರು ಮಾಡಬೇಕು ಎಂದು ಸಮಾಜ ಸೇವಕ ಹಾಗೂ ಲ್ಯಾಂಡ್ ಡೆವಲೂ ಪರ್ ಸೈಯದ್ ನಾಸಿರ್ ಹುಸೇನ್ ಹೇಳಿದರು.
ಸಮಾರಂಭದಲ್ಲಿ ಮಿಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಸಂಸ್ಥಾಪಕರಾದ ಸಯ್ಯದ್ ಗೌಸ್ ಪಾಷಾ ಖಾಜಿ ಆಡಳಿತ ಮಂಡಳಿ ನಿರ್ದೇಶಕರಾದ ಅಬ್ದುಲ್ ಅಜೀಜ್ ಮಾನ್ವಿಕರ್ ಸೈಯದ್ ಇಮಾಮ್ ಹುಸೇನ್ ಸಿಂದೋಗಿ ಕರ್ನಾಟಕ ಮುಸ್ಲಿಂ ಯುನಿಟಿ ಜಿಲ್ಲಾಧ್ಯಕ್ಷ ಜೀಲಾನ್ ಮೈಲೈಕ್, ಸಮಾಜದ ಯುವ ನಾಯಕ ಹಾಗೂ ಉದ್ಯಮಿ ಇಬ್ರಾಹಿಂ ಪಟೇಲ್, ಅಂಜುಮನ್ ಕಮಿಟಿ ಅಧ್ಯಕ್ಷ ಆಸಿಫ್ ಕರ್ಕಿಹಳ್ಳಿ, ಅಬೂಬಕರ್ ಅತ್ತಾರ್ ಶಾಲೆಯ ಮುಖ್ಯ ಶಿಕ್ಷಕ ಮೊಹಮ್ಮದ್ ಅಜೀಜ್ ರೆವಡಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು ಇದೇ ವೇಳೆ ಶಾಲಾ ವಿದ್ಯಾರ್ಥಿಗಳಿಂದ ಸಾಮೂಹಿಕ ಕವಾಯತ್ ಜರುಗಿತು ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ರಂಜಿಸಿತು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 