ಈದ್ ಮಿಲಾದ್: ಪೂರ್ವಭಾವಿ ಶಾಂತಿ ಪಾಲನೆ ಸಭೆ
Eid Milad: A pre-emptive peacekeeping meeting
ಲೋಕದರ್ಶನ ವರದಿ
ಜಮಖಂಡಿ 21: ಪ್ರವಾದಿ ಮಹಮ್ಮದ್ ಪೈಗಂಬರ್ ಅವರು ಶಾಂತಿ, ಸಾಮರಸ್ಯ, ಸಹಬಾಳ್ವೆ, ಸಹೋದರತೆ, ಮಹಿಳೆಯರಿಗೆ ಗೌರವ ಹಾಗೂ ಸಮಾನತೆಯ ಸಂದೇಶವನ್ನು ನೀಡಿದ್ದಾರೆ. ಅಂತವರ ಜಯಂತಿಯೋತ್ಸವನ್ನು ಎಲ್ಲರೂ ಸೇರಿ ಅರ್ಥಪೂರ್ಣವಾಗಿ ಆಚರಿಸಬೇಕೆಂದು ಡಿಎಸ್‌ಪಿ ಸೈಯದ್ ರೋಷನ್ ಜಮೀರ ಹೇಳಿದರು.
ನಗರದ ಶಹರ ಪೊಲೀಸ್ ಠಾಣೆಯಲ್ಲಿ ನಡೆದ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಪೂರ್ವಭಾವಿ ಶಾಂತಿ ಪಾಲನೆ ಸಭೆಯಲ್ಲಿ ವಿವಿಧ ಸಮಾಜದ ಮುಂಖಡರು ಹಾಗೂ ಅಂಜುಮನ್ ಕಮೀಟಿ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಹಲವು ಬದಲಾವಣೆಗಳಾಗಿದ್ದು, ಎಲ್ಲ ಸಮಾಜಗಳೊಂದಿಗೆ ಸಹಕಾರದಿಂದ ಕಾರ್ಯನಿರ್ವಹಿಸಲಾಗುತ್ತಿದೆ. ಈದ್ ಮಿಲಾದ್ ಸೇರಿದಂತೆ ಮುಂದಿನ ಎಲ್ಲ ಹಬ್ಬಗಳ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ. ಎಲ್ಲ ಸಮುದಾಯಗಳ ಮುಖಂಡರು ಶಾಂತಿ ಕಾಪಾಡುವಲ್ಲಿ ಪೊಲೀಸರೊಂದಿಗೆ ಸಹಕರಿಸಬೇಕು ಎಂದರು.
ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಈದ್ ಮಿಲಾದ್ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಎಲ್ಲ ಸಮಾಜದವರು ಒಗ್ಗಟ್ಟಿನಿಂದ ಹಬ್ಬ ಆಚರಿಸಬೇಕು. ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸಲು ಪೊಲೀಸ್ ಇಲಾಖೆ ಅಗತ್ಯ ವ್ಯವಸ್ಥೆ ಮಾಡಲಿದೆ. ಇದೇ ವೇಳೆ ಮುಂದೆ ನಡೆಯುವ ಯಾವುದೇ ಹಬ್ಬಗಳ ಸಂದರ್ಭದಲ್ಲಿ ಡಿಜೆ ಸೌಂಡ್‌ಗೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಿಪಿಐ ಮಲ್ಲಪ್ಪ ಮಡ್ಡಿ ಮಾತನಾಡಿ, ಮೆರವಣಿಗೆಯಲ್ಲಿ ಶಾಲಾ ಮಕ್ಕಳು ಸರದಿಯಲ್ಲಿ ಶಿಸ್ತಿನಿಂದ ಸಾಗುತ್ತಾರೆ. ಆದರೆ ಕೆಲ ಯುವಕರು ಅಡ್ಡಾದಿಡ್ಡಿಯಾಗಿ ತೆರಳುವುದರಿಂದ ಸಂಚಾರ ವ್ಯವಸ್ಥೆಗೆ ತೊಂದರೆಯಾಗುತ್ತದೆ. ರ್ಯಾಲಿಯಲ್ಲಿ ಭಾಗವಹಿಸುವ ಯುವಕರು ಶಿಸ್ತಿನಿಂದ ಸಾಗಿದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಸಮಾಜದ ಎಲ್ಲ ಮುಖಂಡರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಅಮಜುಮನ್ ಕಮೀಟಿ ಅಧ್ಯಕ್ಷ ತೋಫೀಕ ಪಾರ್ಥನಳ್ಳಿ, ರಾಜು ಮಸಳಿ, ಪ್ರದೀಪ ಮೆಟ್ಟಗುಡ್ಡ, ವಿನೋದ ಬಿರಾದರ, ಸಮದ್ ಝಂಡೆ ಮಾತನಾಡಿದರು.ಶಹರ ಪೋಲಿಸ್ ಠಾಣೆಯ ಪಿಎಸ್‌ಐ ಅನೀಲ ಕುಂಬಾರ ಸ್ವಾಗತಿಸಿ, ವಂದಿಸಿದರು. ಸಭೆಯಲ್ಲಿ ವಿವಿಧ ಸಮಾಜಗಳ ಮುಖಂಡರು, ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 