ಈದ್ ಮೀಲಾದ್‌: ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ

ಈದ್ ಮೀಲಾದ್‌: ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ  Eid Milad: Distribution of fruits to patients


ತಾಳಿಕೋಟಿ 28 : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೀರತ್ ಯಂಗ್ ಕಮಿಟಿ ವತಿಯಿಂದ ಈದ್ ಮೀಲಾದ್ ಹಬ್ಬದ ಅಂಗವಾಗಿ ಒಳ ಹಾಗೂ ಹೊರರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಾ. ಏ.ಜಿ. ಬಿರಾದಾರ ಅವರು ಶಾಂತಿ, ಪ್ರೀತಿ ಹಾಗೂ ಸಹೋದರತ್ವದ ಸಂದೇಶದೊಂದಿಗೆ ಎಲ್ಲರೂ ಒಂದಾಗಿ ಬದುಕಬೇಕು ಎಂದರು. ಕಳೆದ 14 ವರ್ಷಗಳಿಂದ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ಮುಂದೆಯೂ ಬಡವರಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಕಮಿಟಿ ಪದಾಧಿಕಾರಿಗಳು ತಿಳಿಸಿದರು.