ಈದ್ ಮಿಲಾದ್‌: ಮುಸ್ಲಿಂ ಬಾಂಧವರಿಗೆ ರುದ್ರ​‍್ಪ ಲಮಾಣಿ ಶುಭಾಶಯ

ಈದ್ ಮಿಲಾದ್‌: ಮುಸ್ಲಿಂ ಬಾಂಧವರಿಗೆ ರುದ್ರ​‍್ಪ ಲಮಾಣಿ ಶುಭಾಶಯ  Eid Milad: Rudra Lamani extends greetings to the Muslim community

ಲೋಕದರ್ಶನ ವರದಿ  

ಹಾವೇರಿ, 27: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವ ರುದ್ರ​‍್ಪ ಲಮಾಣಿ ಅವರು ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯ ಕೋರಿದರು.  ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಗುಡ್ಡನಗೌಡ ಅಂದಾನಿಗೌಡ್ರ, ಜಮೀರ್ ಜಿಗರಿ, ಅತಾವುಲ್ಲಾಖಾನ್ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಬಾಂಧವರು ಉಪಸ್ಥಿತರಿದ್ದರು.  

ಈದ್ ಮಿಲಾದ್ ಅಂಗವಾಗಿ ಹಾವೇರಿ ನಗರದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾಭಕ್ತಿಯಿಂದ ಹಬ್ಬವನ್ನು ಆಚರಿಸಿದರು. ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜೀವನಾದರ್ಶಗಳು ಶಾಂತಿ, ಸೌಹಾರ್ದತೆ, ಸಹೋದರತ್ವ ಹಾಗೂ ಮಾನವೀಯತೆಯ ಸಂದೇಶವನ್ನು ಸಾರುತ್ತವೆ. ಈ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಸೌಹಾರ್ದತೆ ಮತ್ತು ಶಾಂತಿಯನ್ನು ಕಾಪಾಡಬೇಕು ಎಂದು ಮುಖಂಡರು ಕರೆ ನೀಡಿದರು.