ಸೌಹಾರ್ಧತೆ ಬೆಸೆಯುವ ಈದ್-ಮಿಲಾದ್ ಹಬ್ಬ : ಸಂಗನಬಸವ
Eid-Milad is a festival that fosters harmony: Sangana Basava
ಶಿಗಾವಿ 07 : ಭಾರತದಾದ್ಯಂತ ಈದ್‌ಮಿಲಾದ್ ಆಚರಿಸಲಾಗುವ ಒಂದು ಪ್ರೀತಿಯ ಮುಸ್ಲಿಂ ಹಬ್ಬವಾಗಿದೆ. ಇಸ್ಲಾಂ ಧರ್ಮದ ಸಂಸ್ಥಾಪಕ ಪ್ರವಾದಿ ಮುಹಮ್ಮದ್ ಅವರ ಜನ್ಮವನ್ನು ಸ್ಮರಿಸುತ್ತದೆ. ಅವರನ್ನು ಪ್ರಪಂಚದಾದ್ಯಂತ ಮುಸ್ಲಿಮರು ದೇವರ ಸಂದೇಶವಾಹಕ ಎಂದು ಪರಿಗಣಿಸುತ್ತಾರೆ ಹಬ್ಬಗಳು ಸೌಹಾರ್ಧತೆಯನ್ನ ಬೆಸೆಯಬೇಕು ಎಂದು ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಸ್ವಾಮಿಗಳು ಹೇಳಿದರು.
ಪಟ್ಟಣದಲ್ಲಿ ನಡೆದ ಮಹ್ಮದ ಪೈಗಂಬರರ 1500 ವರ್ಷಾಚರಣೆಯ ಸಂದರ್ಭದ ಈದ್-ಮಿಲಾದ್ ಹಬ್ಬದಲ್ಲಿ ಭಾಗವಹಿಸಿದ ಸನ್ಮಾನ ಸ್ವೀಕರಿಸಿ ಮಾತನಾಡಿ, ಮುಸ್ಲಿಂರ ಪವಿತ್ರ ಹಬ್ಬಗಳಲ್ಲೊಂದಾದ ಈದ್-ಮಿಲಾದ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಶುಕ್ರವಾರ ಆಚರಿಸಿದರು. ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ್ ಮಾತನಾಡಿ, ಸಲ್ಲಲ್ಲಾಹು ಅಲೈಹಿವಸಲ್ಲಮ್ ಹುಟ್ಟಿದ ರಬೀವು ಅವ್ವಲ್ ತಿಂಗಳ ಆರಂಭದಿಂದ ತಿಂಗಳ ಕೊನೆಯವರೆಗೂ ಒಂದು ತಿಂಗಳ ಕಾಲ ವಿಶ್ವದಾದ್ಯಂತ ಈದ್ ಮೀಲಾದ್ ಆಚರಣೆಗಳು ನಡೆಯುತ್ತವೆ. ಭಾರತದಲ್ಲಿ ಈದ್ ಮೀಲಾದ್ ಆಚರಣೆಯನ್ನು ಎಲ್ಲಾ ಪಂಗಡದ ಮುಸಲ್ಮಾನರು ಆಚರಿಸುತ್ತಾರೆ ಎಂದರು. ಪಟ್ಟಣದಲ್ಲಿ ಈದ್-ಮಿಲಾದ್ ಹಬ್ಬದಲ್ಲಿ ಭಾಗವಹಿಸಿದ್ದ ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳನ್ನು ಸನ್ಮಾನಿಸಲಾಯಿತು. ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಮಾತನಾಡಿದರು. ಅಂಜುಮನ್ ಕಮೀಟಿ ವತಿಯಿಂದ ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಸ್ವಾಮಿಗಳನ್ನು, ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ್, ಸೋಮಣ್ಣ ಬೇವಿನಮರದ ಅವರನ್ನು ಸನ್ಮಾನಿಸಲಾಯಿತು.
ಪಟ್ಟಣದಾದ್ಯಂತ ಎಲ್ಲ ದರ್ಗಾ, ಮಸೀದಿ ಮನೆ ಅಂಗಡಿ ಮುಂಗಟ್ಟುಗಳು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡಿದ್ದವು, ಎಲ್ಲ ಮಸೀದಿ, ದರ್ಗಾಗಳಲ್ಲಿ ಪ್ರವಾದಿ ಮೊಹಮ್ಮದ ಪೈಗಂಬರರವರ ಜೀವನ ಚರಿತ್ರೆಯ ಪ್ರವಚನಗಳನ್ನು ಧರ್ಮ ಗುರುಗಳಿಂದ ಬೋಧಿಸಲಾಯಿತು. ನಂತರ ಪಟ್ಟಣದಾದ್ಯಂತ ಮೆರವಣಿಗೆಯೂ ಜರುಗಿತು. ಅಂಜುಮನ್ ಕಮೀಟಿ ಅಧ್ಯಕ್ಷರು, ಸದಸ್ಯರು ವಿವಿಧ ಮುಸ್ಲಿಂ ಮುಖಂಡರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 