ಎಕೀನಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
Ekina awarded with state-level best teacher award
ತಾಳಿಕೋಟಿ 04: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವತಿಯಿಂದ ಫೆ. 28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೊಣ್ಣೂರ ಉರ್ದು ಕ್ಲಸ್ಟರ್ ಸಿಆರಿ್ಪಯಾದ ಮೊಹಮ್ಮದ್ ಜಾವೀದ ಅಬ್ದುಲ್ ರಹಮಾನ ಎಕೀನ(ತಾಳಿಕೋಟಿ) ಇವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಗಾಗಿ ಮಹಾತ್ಮ ಜ್ಯೋತಿಬಾ ಫುಲೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಜಾವೀದ ಯಕೀನ ಅವರು ಇದನ್ನು ತಮ್ಮ ವೈಯಕ್ತಿಕ ಸಾಧನೆ ಎಂದು ಪರಿಗಣಿಸದೆ ಶಿಕ್ಷಕ ಸಮುದಾಯದ ಸಹಕಾರ ಮತ್ತು ಪ್ರೋತ್ಸಾಹದ ಫಲವೆಂದು ಹೇಳಿದರು. ಸನ್ಮಾನಿತ ಶಿಕ್ಷಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಶಿಕ್ಷಣ ಸಚಿವರು, ರಾಜ್ಯಾಧ್ಯಕ್ಷ ಚಂದ್ರಶೇಖರ್ ನುಗಲಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ಎಚ್‌ಎಸ್, ಜಿಲ್ಲಾಧ್ಯಕ್ಷ ಅರ್ಜುನ್ ಲಮಾಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಲ್ಲಾಭಕ್ಷ ವಾಲಿಕಾರ, ಜಿಓಸಿಸಿ ನಿರ್ದೇಶಕ ಹಣಮಂತ ಕೊಣದಿ,
ತಾಲೂಕ ಅಧ್ಯಕ್ಷ ಬಿ.ಟಿ.ವಜ್ಜಲ್ ಹಾಗೂ ತಾಲೂಕ ಪ್ರಧಾನ ಕಾರ್ಯದರ್ಶಿ ಎಸ್ ಬಿ ಬೀರಗೊಂಡ, ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಅಂಬಿಕಾ ಗೋಗಿ, ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಸಾವಳಗಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಆರಿ್ಬ.ದಮ್ಮೂರಮಠ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು. ಈ ಪ್ರಶಸ್ತಿ ಮುಂದಿನ ದಿನಗಳಲ್ಲಿ ನನಗೆ ಇನ್ನಷ್ಟು ನಿಷ್ಠೆ ಪ್ರಮಾಣಿಕತೆ ಮತ್ತು ಸಮರ್ಣ ಭಾವದಿಂದ ಶಿಕ್ಷಣ ಸೇವೆ ಸಲ್ಲಿಸಲು ಪ್ರೇರಣೆಯಾಗಲಿದೆ ಎಂದು ತಿಳಿಸಿ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 