ಎಲ್ ನಿನೊ ಪರಿಣಾಮ: ಜಲ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸಲು ಚಿತ್ರಕಲಾ ಸ್ಪರ್ಧೆ
El Niño Effect: Art Competition to Raise Public Awareness About Water Conservation
ಗದಗ, ಆ.11: ಈ ವರ್ಷ ಮುಂಗಾರಿನ ಮೇಲೆ ‘ಎಲ್ ನಿನೊ’ ಪರಿಣಾಮ ತೀವ್ರವಾಗಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ನೀರಿನ ಸದ್ಬಳಕೆ ಮತ್ತು ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಅಂತರ್ಜಲ ಇಲಾಖೆ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಜಾಗತಿಕ ವಾತಾವರಣದಲ್ಲಿ ಪೆಸಿಫಿಕ್ ಮಹಾಸಾಗರದ ಮೇಲ್ಮೈ ನೀರು ಅಸಾಮಾನ್ಯವಾಗಿ ಬೆಚ್ಚಗಾಗುವ ಮೂಲಕ ಮಳೆ ಕೊರತೆ ಉಂಟುಮಾಡುವ ಹಾಗೂ ಜಾಗತಿಕ ಹವಾಮಾನದ ಮೇಲೆ ಪರಿಣಾಮ ಬೀರುವ ನೈಸರ್ಗಿಕ ಹವಾಮಾನ ವಿದ್ಯಮಾನವೇ ‘ಎಲ್ ನಿನೊ’ ಎಂದು ತಜ್ಞರು ವಿವರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಅಂತರ್ಜಲ ನಿರ್ದೇಶನಾಲಯ ಬೆಂಗಳೂರು, ಹಿರಿಯ ಭೂವಿಜ್ಞಾನಿ, ಜಿಲ್ಲಾ ಅಂತರ್ಜಲ ಕಚೇರಿ ಗದಗ ಹಾಗೂ ಶಾಲಾ ಶಿಕ್ಷಣ ಇಲಾಖೆ ಗದಗ ಮತ್ತು ವಿಜಯನಗರ ಶುಗರ್ ಪ್ರೈವೇಟ್ ಲಿಮಿಟೆಡ್, ಗಂಗಾಪುರ ತಾಲೂಕು ಮುಂಡರಗಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮದಡಿ “ಜಲ ಸಂರಕ್ಷಣೆ ಮತ್ತು ಸದ್ಬಳಕೆ” ವಿಷಯ ಕುರಿತು ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು.
ಗದಗ ನಗರದ ಶ್ರೀ ಸಿ.ಡಿ.ಒ. ಜೈನ್ ಆಂಗ್ಲ ಮಾಧ್ಯಮ ಪ್ರೌಚಿಢಶಾಲೆಯಲ್ಲಿ ಆಗಸ್ಟ್ 10ರಂದು ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಯಿತು. ಗದಗ ಜಿಲ್ಲೆಯ ವಿವಿಧ ತಾಲೂಕುಗಳ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಜನಜಾಗೃತಿಯ ವಿಶೇಷ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಜಲ ಸಂರಕ್ಷಣೆ, ನೀರಿನ ಮಿತ ಬಳಕೆ ಹಾಗೂ ಪರಿಸರ ಸಂರಕ್ಷಣೆಯ ಮಹತ್ವವನ್ನು ತಮ್ಮ ಕಲಾಕೃತಿಗಳ ಮೂಲಕ ಬಿಂಬಿಸಿದರು.
ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಅಂತರ್ಜಲ ಕಚೇರಿಯ ಹಿರಿಯ ಭೂವಿಜ್ಞಾನಿಗಳಾದ ಸಂತೋಷ್ ಚ. ಪಾಟೀಲಗಾಣಿಗೇರೆ, ಉಪ ನಿರ್ದೇಶಕರ ಕಚೇರಿಯ ವಿಷಯ ಪರೀವೀಕ್ಷಕರಾದ ಗೀತಾ ಕುಲಕರ್ಣಿ, ಅಂತರ್ಜಲ ಕಚೇರಿಯ ಭೂವಿಜ್ಞಾನಿಗಳಾದ ಮಲ್ಲಪ್ಪ ಕಲ್ಯಾಣಪುರ ಹಾಗೂ ಪ್ರವೀಣ್ ಕರಬಸನ್ನವರ, ವಿಜಯನಗರ ಶುಗರ್ ಪ್ರೈವೇಟ್ ಲಿಮಿಟೆಡ್ನ ಗಂಗಾಪುರ ತಾಲೂಕು ಮುಂಡರಗಿ ವ್ಯವಸ್ಥಾಪಕರಾದ ತಿರುಮಲ ರೆಡ್ಡಿ, ಶಂಕರಗೌಡ, ಟಿ.ಆರ್. ಬೇವಿನಮರದ, ಎನ್.ಎಂ. ಚಿತ್ರಗಾರ ಹಾಗೂ ಎಚ್.ಎಸ್. ಬ್ಯಾಳಿ ಅವರು ತೀಪುಗಾರರಾಗಿ ಆಗಮಿಸಿದ್ದರು.
ಪರಿಸರದ ಸಂಕೇತವಾಗಿ ಸಸಿಗಳಿಗೆ ನೀರುಣಿಸುವ ಮೂಲಕ ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಲಾಯಿತು. ಸ್ಪರ್ಧೆಯಲ್ಲಿ ವಿನಾಯಕ ಭಸ್ಮೆ ಪ್ರಥಮ, ಪೂಜಾ ಬ. ದೇಸಾಯಿ ದ್ವಿತೀಯ ಹಾಗೂ ಆದರ್ಶ ಬಾತಖಾನಿ ತೃತೀಯ ಸ್ಥಾನ ಪಡೆದರು. ವಿಜೇತರಿಗೆ ಕ್ರಮವಾಗಿ ?10,000, ?7,500 ಹಾಗೂ ?5,000 ನಗದು ಬಹುಮಾನ ಮತ್ತು ಪ್ರಶಂಸನಾ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ಸ್ಪರ್ಧೆಯಲ್ಲಿ ಭಾಗವಹಿಸಿದ್ದ 15 ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರದೊಂದಿಗೆ ಸಮಾಧಾನಕರ ನಗದು ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶೋಭಾ ಹುಳ್ಳಿಯವರು ನಿರೂಪಣೆ ಮಾಡಿದರು. ಪ್ರವೀಣರವರು ವಂದನಾರೆ್ಣ ಸಲ್ಲಿಸಿದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 