ಬೆಂಗಳೂರು, ಅ 02: ಚುನಾಯಿತ ಪ್ರತಿನಿಧಿಗಳ ಚಲನವಲನಗಳನ್ನು ಜನ ಗಮನಿಸುತ್ತಿದ್ದು, ಹಿರಿಯರು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಗ್ರಾಮ ಪಂಚಾಯತಿ ಪ್ರತಿನಿಧಿಗಳಿಗೆ ಕಿವಿ ಮಾತು ಹೇಳಿದರು.
ಗಾಂಧಿ ಜಯಂತಿ ಹಿನ್ನೆಲೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು. ಹಳ್ಳಿಗಳು ಭಾರತದ ಆತ್ಮ ಎಂದು ಗಾಂಧಿ ಬಣ್ಣಿಸಿದ್ದರು.ಭಾರತದ ಭವಿಷ್ಯ ಹಳ್ಳಿಗಳಲ್ಲಿ ಅಡಗಿದೆ ಎಂದು ಗಾಂಧಿ ಹೇಳಿದ್ದರು. ಗಾಂಧಿ ಕನಸನ್ನು ಸಾಕಾರಗೊಳಿಸುವ ಪ್ರಯತ್ನವನ್ನು ಕನರ್ಾಟಕ ಗ್ರಾಮೀಣಾಭಿವೃದ್ಧಿ ಇಲಾಖೆ ಮಾಡುತ್ತಿದೆ ಎಂದು ಅವರು ವಿವರಿಸಿದರು.
ಗ್ರಾಮದ ಸಂಪೂರ್ಣ ಅಭಿವೃದ್ಧಿಗೆ ಕನರ್ಾಟಕ ಬದ್ಧವಾಗಿದೆ.ಗಾಂಧಿ ಚಿಂತನೆ ಅನುಷ್ಠಾನಕ್ಕೆ ತರುವಲ್ಲಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕನರ್ಾಟಕ ಮುಂಚೂಣಿಯಲ್ಲಿದೆ. ಕೆರೆ ಕಟ್ಟೆ ಪುನರುಜ್ಜೀವನ, ಚೆಕ್ ಡ್ಯಾಮ್ ನಿಮರ್ಾಣ ಮಾಡಲಾಗುತ್ತಿದೆ. ಪಂಚಾಯತ್ ರಾಜ್ಯ ವ್ಯವಸ್ಥೆ ಗಣಕೀಕರಣಗೊಳಿಸಲು ಸಕರ್ಾರ ಬದ್ಧ. ಗ್ರಾಮ ಪಂಚಾಯತಿ ಆಸ್ತಿಗಳನ್ನು ಡಿಜಿಟಲೈಸ್ ಮಾಡಲು ನಾವು ಮುಂದಾಗುತ್ತಿದ್ದೇವೆ. ಭ್ರಷ್ಟಾಚಾರ ತೊಡೆದು ಹಾಕಿ, ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ಕರೆ ನೀಡಿದರು.
ಇದೇ ವೇಳೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಉದ್ಯೋಗ ಖಾತ್ರಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯನವರಿಗೆ ಪಾಪ ಮಾಹಿತಿ ಇದ್ದ ಹಾಗಿಲ್ಲ. ಹಾಗಾಗಿ ಅವರು ಟ್ವೀಟ್ ಮಾಡಿ ಉದ್ಯೋಗ ಖಾತ್ರಿ ಯೋಜನೆ ನಿಲ್ಲಿಸ್ತಾರೆ ಅಂತ ಅವರು ಟ್ವೀಟ್ ಮಾಡಿ ಮಾಡಿದ್ದಾರೆ. ನಮ್ಮ ಸಕರ್ಾರ 511 ಕೋಟಿ ರೂ. ಕೂಲಿ ಬಾಕಿಯಲ್ಲಿ 341 ಕೋಟಿ ಹಣವನ್ನು ಈಗಾಗಲೇ ಬಿಡುಗಡೆ ಮಾಡಿದೆ. ಒಟ್ಟು ಇದೂವರೆಗೆ ಕೇಂದ್ರ ಸಕರ್ಾರದಿಂದ ಕೂಲಿ ಹಾಗೂ ಉಪಕರಣಗಳಿಗೆ ಹಣ 950 ಕೋಟಿ ರೂ. ಕೇಂದ್ರ ಬಿಡುಗಡೆ ಮಾಡಿದೆ ಎಂದು ಅವರು ಸ್ಪಷ್ಟಪಡಿಸಿದರು.
ರಾಜ್ಯದ ಜನರಿಗೆ ಏನೇನು ಅನುಕೂಲ ಮಾಡಲಾಗುತ್ತೋ ಅದನ್ನೆಲ್ಲಾ ಮಾಡುತ್ತೇವೆ. ಗ್ರಾಮ ಪಂಚಾಯಿತಿಗಳಲ್ಲಿ ಫಿಟ್ ಇಂಡಿಯಾ ಯೋಜನೆಯಡಿ ಪ್ರತಿ ಪಂಚಾಯಿತಿಗೂ ಓಪನ್ ಜಿಮ್ ತೆರೆಯಲಾಗುವುದು. ಇದು ಪ್ರಧಾನಿ ನರೇಂದ್ರ ಮೋದಿ ಕನಸು. ಗ್ರಾಮಸ್ವರಾಜ್ಯ ಗಾಂಧಿ ಕನಸು. ಇವುಗಳನ್ನು ನನಸು ಮಾಡಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ, ರಾಜಕೀಯ ಕಾರ್ಯದಶರ್ಿ ಎಸ್.ಆರ್. ವಿಶ್ವನಾಥ್, ಯೋಜನಾ ಆಯೋಗದ ಉಪಾಧ್ಯಕ್ಷ ಪುಟ್ಟಸ್ವಾಮಿ, ಕಾರ್ಯದಶರ್ಿ ನಾಗಲಾಂಬಿಕದೇವಿ ಮತ್ತಿತರರು ಉಪಸ್ಥಿತಿತರಿದ್ದರು.
2018-19ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ 176 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಶಸ್ತಿ ವಿಜೇತರಿಗೆ ಗಾಂಧಿ ಗ್ರಾಮ ಪ್ರಶಸ್ತಿ ಪ್ರದಾನ ಮಾಡಿದರು.