ಜೀವನದ ಸಂಧ್ಯಾಕಾಲದಲ್ಲಿ ಹಿರಿಯರಿಗೆ ನೆಮ್ಮದಿ ಅಗತ್ಯ: ಹಿರಿಯ ಸಿವಿಲ್ ನ್ಯಾಯಾಧೀಶರು ಶ್ರೀನಿವಾಸ

ಕೊಪ್ಪಳ: ಜೀವನದ ಸಂಧ್ಯಾಕಾಲದಲ್ಲಿ ಹಿರಿಯ ಜೀವಗಳಿಗೆ ವಿಶ್ರಾಂತಿ, ನೆಮ್ಮದಿಯ ಅಗತ್ಯವಿದೆ. ಹಿರಿಯ ನಾಗರಿಕರಿಗೆ ಆರ್ಥಿಕ, ದೈಹಿಕ, ಮಾನಸಿಕವಾಗಿ ತಮ್ಮ ಹಿತರಕ್ಷಣೆ ಮಾಡಿಕೊಳ್ಳಲು ಕಾನೂನಿನಲ್ಲಿ ಅವಕಾಶ ಮತ್ತು ಹಕ್ಕುಗಳಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯಾದ ಟಿ. ಶ್ರೀನಿವಾಸ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕೊಪ್ಪಳ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಜಿಲ್ಲಾ ನಿವೃತ್ತ ನೌಕರರ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಬಿ. ಟಿ. ಪಾಟೀಲ್ ನಗರದ ಹಗಲು ಯೋಗಕ್ಷೇಮ ಕೇಂದ್ರದಲ್ಲಿ ಹಿರಿಯ ನಾಗರಿಕ ದಿನಾಚರಣೆ ಅಂಗವಾಗಿ ಆನ್ ನಾಲ್ಸಾ (ಲೀಗಲ್ ಸವರ್ಿಸ್ ಟು ಸೀನಿಯರ್ ಸಿಟಿಜನ್) 2016 ರ ಯೋಜನೆ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಪಟ್ಟಣಗಳಿಗಿಂತ ಹೆಚ್ಚು ಹಳ್ಳಿಗಳಲ್ಲಿ ಹಿರಿಯರು ಮುಪ್ಪಾದರೂ ದುಡಿಮೆಯಲ್ಲಿ ತೊಡಗಿಕೊಳ್ಳಬೇಕಾದ ಅನಿವಾರ್ಯತೆ ಇದೆ.  ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಹಿರಿಯ ನಾಗರಿಕರು ಕೊನೆ ಕಾಲದವರೆಗೂ ಕೆಲಸ ಮಾಡುತ್ತಲೇ ಇರುತ್ತಾರೆ. ಜೀವನದ ಸಂಧ್ಯಾಕಾಲದಲ್ಲಿ ಹಿರಿಯ ಜೀವಗಳಿಗೆ ವಿಶ್ರಾಂತಿ, ನೆಮ್ಮದಿ ಸಿಗುವುದು ಅಗತ್ಯವಿದೆ.  ಹಿರಿಯ ನಾಗರಿಕರಿಗೆ ಆರ್ಥಿಕ, ದೈಹಿಕ, ಮಾನಸಿಕವಾಗಿ ತಮ್ಮ ಹಿತರಕ್ಷಣೆ ಮಾಡಿಕೊಳ್ಳಲು ಕಾನೂನಿನಲ್ಲಿ ಅವಕಾಶ ಮತ್ತು ಹಕ್ಕುಗಳಿವೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು, ಸಂಕಷ್ಟದ ಪರಿಸ್ಥಿತಿಯಲ್ಲಿ ಹಿರಿಯ ನಾಗರಿಕರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದ ನೆರವು ಪಡೆಯಬಹುದು ಎಂದು ಹೇಳಿದರು.ವಕೀಲರಾದ ಎಸ್. ಬಿ. ಪಾಟೀಲ್ ಮಾತನಾಡಿ, ಹಿರಿಯ ನಾಗರಿಕರಿಗೆ ಆಗುತ್ತಿರುವ ತೊಂದರೆ ನಿವಾರಿಸಲು ಮಧ್ಯವರ್ತಿಗಳಿಗೆ ಅವಕಾಶವಿಲ್ಲ. ಅನ್ಯಾಯಕ್ಕೆ ಒಳಗಾದವರೇ ನೇರವಾಗಿ ಅಜರ್ಿ ಸಲ್ಲಿಸಬಹುದು ಎಂದು ಅವರು ಹೇಳಿದರು. 

ಕೊಪ್ಪಳ ಜಿಲ್ಲಾ ಅಂವಿಕಲರ ಕಲ್ಯಾಣಾಧಿಕಾರಿ ಡಿ. ಎನ್. ಮೂಲಿಮನಿ, ಹಿರಿಯ ನ್ಯಾಯವಾದಿಗಳಾದ ಡಿ. ರಾಜಣ್ಣ, ತಾಳಿಕೋಟೆ ಸಿದ್ಧೇಶ್ವರ ವಿದ್ಯಾಪೀಠ ಅಧ್ಯಕ್ಷರಾದ ಶರಣಗೌಡ ಡಿ. ಬಿರಾದರ್, ಕೊಪ್ಪಳ ಹಗಲು ಯೋಗಕ್ಷೇಮ ಕೇಂದ್ರದ ಸಲಹಾ ಸಮಿತಿಯ ಅಧ್ಯಕ್ಷ ನಾಗಪ್ಪ ಬಳಿಗೇರ್, ಅಲ್ಲಮಪ್ರಭು ಬೆಟ್ಟದೂರ, ಬಸವರಾಜ ಆಕಳವಾಡಿ, ಬಿ.ಎಫ್.ಬೀರನಾಯಕ, ಮಹೇಶ ಆರೇರ, ಶಿವಕುಮಾರ ಸೇರಿದಂತೆ ಹಿರಿಯ ನಾಗರಿಕರು ಪಾಲ್ಗೊಂಡಿದ್ದರು.