ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆ
ಹುಬ್ಬಳ್ಳಿ 14 : ದಿ ಹುಬ್ಬಳ್ಳಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ದಾರ್ಮಿಕ, ಸಾಮಾಜಿಕ ಸೇವಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಬಸವಾಭಿಮಾನಿಗಳು, ಆತ್ಮೀಯರಾದ ಸಂಭಾಜಿಕಲಾಲ್ ಅವರ ಧರ್ಮಪತ್ನಿ ಪ್ರಿಯಾಎಸ್‌ಕಲಾಲ್ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಶಾಲು, ಮಾಲಾರೆ್ಣ ಮಾಡಿ, ಹಣ್ಣುಗಳನ್ನು ನೀಡಿಗೌರವ ಪೂರ್ವಕವಾಗಿ ಹೆಮ್ಮೆ, ಅಭಿಮಾನದಿಂದ ಸನ್ಮಾನಿಸಿದರು. ಹುತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ಶುಭಕೋರಿದರು. ಸಂಭಾಜಿಕಲಾಲ್ ಅವರ ಮಗಳು ತನಿಷಾ, ತಬಲಾ ಕಲಾವಿಧಡಾ. ನಾಗಲಿಂಗ ಮುರಗಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮುಂತಾದವರು ಇದ್ದರು. ಗ್ರಂಥಪಾಲಕ ಡಾ.ಸುರೇಶ ಡಿ. ಹೊರಕೇರಿ ಮಾತನಾಡಿ ಪ್ರತಿಷ್ಟಿತ ದಿ ಹುಬ್ಬಳ್ಳಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ನಿರ್ದೇಶಕರಾಗಿ ಪ್ರಿಯಾಎಸ್‌ಕಲಾಲ್ ಆಯ್ಕೆಯಾಗಿದ್ದು ತುಂಬಾ ಸಂತೋಷದ ಹಾಗೂ ಹೆಮ್ಮೆಯ ವಿಷಯ. ಪ್ರಿಯಾಎಸ್‌ಕಲಾಲ್‌ಅವರು ಬ್ಯಾಂಕಿನ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಲಿ, ಗ್ರಾಹಕರಿಗೆ ಉತ್ಕೃಷ್ಟ ಸೇವೆಯನ್ನು ನೀಡುವಂತಾಗಲಿ ಎಂದು ಶುಭಕೋರಿದರು.