ಚುನಾವಣಾ ಆಯೋಗದ ಗಣತಿ ಕಾರ್ಯ ಸರಳ; ಆತಂಕ ಬೇಡ: ಎಚ್.ಎಫ್. ಅಕ್ಕಿ
Election Commission's enumeration work is simple; no need to worry: H.F. Akki
ರಾಣೆಬೆನ್ನೂರು, ಜು.11 : ಚುನಾವಣಾ ಆಯೋಗದ ವತಿಯಿಂದ ನಡೆಯುತ್ತಿರುವ ಗಣತಿ ಕಾರ್ಯ ಅತ್ಯಂತ ಸರಳವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ಫೇವರ್ಡ್ ಕೆ. ಉಪಾಧ್ಯಕ್ಷ ಎಚ್.ಎಫ್. ಅಕ್ಕಿ ತಿಳಿಸಿದ್ದಾರೆ.
ನಗರದ ವಿವಿಧ ಬಡಾವಣೆಗಳಲ್ಲಿ ಈಗಾಗಲೇ ಗಣತಿ ನಮೂನೆಗಳ ವಿತರಣೆ ಮತ್ತು ಮಾಹಿತಿ ಸಂಗ್ರಹ ಕಾರ್ಯ ಆರಂಭಗೊಂಡಿದೆ. ಮನೆಗಳಿಗೆ ಭೇಟಿ ನೀಡುವ ಬಿ.ಎಲ್.ಒ.ಗಳು ಕೇಳುವ ಎಲ್ಲ ಪ್ರಶ್ನೆಗಳಿಗೆ ಸಮರ್ಕ ಮಾಹಿತಿ ನೀಡಿದರೆ ಸಾಕು. ಈ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲ ಅಥವಾ ಆತಂಕಕ್ಕೆ ಅವಕಾಶವಿಲ್ಲ ಎಂದು ಅವರು ಹೇಳಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ತಮ್ಮ ಸಂಸ್ಥೆ ಹಾಗೂ ಜಿಲ್ಲೆಯ ಸ್ವಯಂಸೇವಾ ಸಂಘಟನೆಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಂಡಿವೆ. ಚುನಾವಣಾ ಆಯೋಗವು ಜುಲೈ 29, 2026 ಅನ್ನು ಅಂತಿಮ ದಿನಾಂಕವಾಗಿ ನಿಗದಿಪಡಿಸಿರುವುದರಿಂದ, ಮನೆಗಳಿಗೆ ಬರುವ ಬಿ.ಎಲ್.ಒ.ಗಳಿಗೆ ಅಗತ್ಯ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ನೀಡಿ ಪ್ರಕ್ರಿಯೆ ಪೂರ್ಣಗೊಳಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಚಿತ್ರ: ರಾಣೆಬೆನ್ನೂರಿನ ಗೌರೀಶಂಕರ ನಗರದ ನೀಡ್ಸ್ ಸೇವಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಫ್. ಅಕ್ಕಿ ಅವರ ನಿವಾಸಕ್ಕೆ ಭೇಟಿ ನೀಡಿದ ಬಿ.ಎಲ್.ಒ. ಪರಮೇಶಪ್ಪ ದೊಡ್ಡಮನಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಾಹಿತಿ ನೀಡಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 