ಭಾರತ ಚುನಾವಣಾ ಆಯೋಗ
Election Commission of India
ಭಾರತ ಚುನಾವಣಾ ಆಯೋಗ
ಆಧಾರ್ ನೊಂದಿಗೆ ಎಪಿಕ್(ಇಕಋ) ಜೋಡಣೆಗೆ ಶೀಘ್ರ ಕ್ರಮ: ಆಯುಕ್ತ ಜ್ಞಾನೇಶ್ ಕುಮಾರ್
ಬಳ್ಳಾರಿ 19: ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (ಇಕಋ) ಸಂಖ್ಯೆಯನ್ನು ಕೂಡಲೇ ಜೋಡಣೆ (ಐಟಿಞ) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರು ತಿಳಿಸಿದ್ದಾರೆ.
ನವದೆಹಲಿಯ ನಿರ್ವಚನ ಸದನದಲ್ಲಿ ಚುನಾವಣಾ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರು ಕೇಂದ್ರ ಗೃಹ ಕಾರ್ಯದರ್ಶಿ, ಕಾರ್ಯದರ್ಶಿ ಶಾಸಕಾಂಗ ಇಲಾಖೆ, ಕಾರ್ಯದರ್ಶಿ ಮೇಟಿ ಮತ್ತು ಯುಐಡಿಎಐ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಮತ್ತು ಇಸಿಐನ ತಾಂತ್ರಿಕ ತಜ್ಞರೊಂದಿಗೆ ಮಂಗಳವಾರ ಸಭೆ ನಡೆಸಿ ಚರ್ಚಿಸಿದರು.
ಚುನಾವಣಾ ಆಯೋಗವು ಆರ್ಟಿಕಲ್ 326, ಆರ್‌ಪಿ ಆಕ್ಟ್, 1950 ಮತ್ತು ಸುಪ್ರೀಂ ಕೋರ್ಟ್ ತೀರ್ುಗಳ ಪ್ರಕಾರ ಕ್ರಮ ಕೈಗೊಳ್ಳುತ್ತದೆ. ಯುಐಡಿಎಐ ಮತ್ತು ಇಸಿಐ ಯ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ.
ಭಾರತದ ಸಂವಿಧಾನದ 326 ನೇ ವಿಧಿಯ ಪ್ರಕಾರ, ಮತದಾನದ ಹಕ್ಕನ್ನು ಭಾರತದ ನಾಗರಿಕರಿಗೆ ಮಾತ್ರ ನೀಡುವುದು, ಆಧಾರ್ ಕಾರ್ಡ್ ವ್ಯಕ್ತಿಯ ಗುರುತನ್ನು ಮಾತ್ರ ಸ್ಥಾಪಿಸುತ್ತದೆ. ಹಾಗಾಗಿ ಎಪಿಕ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಸಂವಿಧಾನದ 326 ನೇ ವಿಧಿ, 1950 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 23(4), 23(5) ಮತ್ತು 23(6) ರ ನಿಬಂಧನೆಗಳ ಪ್ರಕಾರ ಕ್ರಮವಹಿಸಲಾಗುವುದು.
ಅದರಂತೆ, ಯುಐಡಿಎಐ ಮತ್ತು ಇಸಿಐನ ತಾಂತ್ರಿಕ ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 