ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ

Electricity tariff hiked by 36 paise per unit after milk price hike

ಬೆಂಗಳೂರು 27: ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನತೆಗೆ ಒಂದೇ ದಿನ ಎರಡೇರಡು ಶಾಕ್ ನೀಡಿದೆ.

ಗುರುವಾರ ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ವಿದ್ಯುತ್‌ ದರ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ ಇಂದು ಆದೇಶ ಹೊರಡಿಸಿದೆ.

ವಿದ್ಯುತ್ ಪ್ರಸರಣ ಮತ್ತು ಎಸ್ಕಾಂಗಳ ಸಿಬ್ಬಂದಿಗಳ ಪಿಂಚಣಿ ಹಾಗೂ ಗ್ರಾಚ್ಯುಟಿ ಪಾವತಿಸಲು ಹಾಗೂ ಉಚಿತ ವಿದ್ಯುತ್ ಯೋಜನೆಗಳ ವೆಚ್ಚ ಭರಿಸಲು ಈ ದರ ಏರಿಕೆ ಮಾಡಲಾಗುತ್ತಿದೆ ಎಂದು ಕೆಇಆರ್‌ಸಿ ತಿಳಿಸಿದೆ.